ನ್ಯೂಸ್ ನಾಟೌಟ್ : ಐದು ವರ್ಷ ಪಿಎಫ್ಐ ಹಾಗೂ ಮಿತ್ರ ಸಂಘಟನೆಗಳನ್ನು ಅನ್ನು ನಿಷೇಧಿಸಿ ಕೇಂದ್ರ ಸರಕಾರ ಮಹತ್ವದ ಆದೇಶ ಹೊರಡಿಸಿದೆ.
ಪಿಎಫ್ಐ ಹಾಗೂ ಅದರ ಬೆಂಬಲಿತ ಸಂಸ್ಥೆಯನ್ನು ಯಾಕೆ ನಿಷೇಧ ಮಾಡಿದ್ದೇವೆ ಅನ್ನುವುದರ ಬಗ್ಗೆ ಕೇಂದ್ರ ಸರಕಾರ ಸ್ಪಷ್ಟವಾದ ಕಾರಣಗಳನ್ನು ಗಜೆಟ್ ನಲ್ಲಿ ನೀಡಿದೆ. ಈ ಪ್ರಕಾರವಾಗಿ ನೋಡುವುದಾದರೆ ಬೆಳ್ಳಾರೆಯಲ್ಲಿ ನಡೆದಿದ್ದ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ಅನ್ನುವುದನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಇದು ಪಿಎಫ್ಐ ನಡೆಸಿದ ಕೊಲೆ ಎಂದು ಇದರಲ್ಲಿ ತಿಳಿಸಲಾಗಿದೆ.
ಕೇರಳ, ತಮಿಳುನಾಡು ಹಾಗೂ ಕರ್ನಾಟಕದಲ್ಲಿ ನಡೆದ ಹಲವು ಕೊಲೆ ಪ್ರಕರಣಗಳಲ್ಲಿ ಪಿಎಫ್ ಐ ಭಾಗಿಯಾಗಿತ್ತು ಎಂದು ಕೇಂದ್ರ ಗಜೆಟ್ ನಲ್ಲಿ ನಮೂದಿಸಿದೆ. 2016 ರಲ್ಲಿ ಕರ್ನಾಟಕದಲ್ಲಿ ನಡೆದ ರುದ್ರೇಶ್, ಶರತ್ ಕೊಲೆ ಪ್ರಕರಣದಲ್ಲಿ ಪಿಎಫ್ಐ ಕಾರ್ಯಕರ್ತರು ಭಾಗಿಯಾಗಿದ್ದರು ಎಂದು ತಿಳಿಸಲಾಗಿದೆ.