ನ್ಯೂಸ್ ನಾಟೌಟ್ : ದುಷ್ಕರ್ಮಿಗಳ ಸಂಚಿಗೆ ಬಲಿಯಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಸಮಾಧಾನಕರ ಘೋಷಣೆಯೊಂದನ್ನು ಮಾಡಿದ್ದಾರೆ.
ಈ ಬಗ್ಗೆ ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಜನತಾ ಸ್ಪಂದನಾ ಸಮಾವೇಶದಲ್ಲಿ ಮಾತನಾಡಿದ ಸಿಎಂ, ಮುಂಬರುವ ದಿನಗಳಲ್ಲಿ ಪ್ರವೀಣ್ ಕುಟುಂಬದ ಸದಸ್ಯರೊಬ್ಬರಿಗೆ ಸಿಎಂ ಕಚೇರಿಯಲ್ಲಿ ನೌಕರಿ ನೀಡುವುದಾಗಿ ಬೊಮ್ಮಾಯಿ ತಿಳಿಸಿದ್ದಾರೆ. ಈ ಮೂಲಕ ಅವರು ಈ ಮೊದಲು ಹೇಳಿಕೊಂಡ ಮಾತನ್ನು ಉಳಿಸಿಕೊಂಡಿದ್ದಾರೆ.