ನ್ಯೂಸ್ ನಾಟೌಟ್ : ಕರ್ನಾಟಕದಲ್ಲಿ ಐಸಿಸ್ ಉಗ್ರರ ಹೆಜ್ಜೆ ಸಪ್ಪಳ ಕೇಳಿಸಿದೆ. ಈ ಬೆನ್ನಲ್ಲೇ ಪೊಲೀಸರು ಭರ್ಜರಿ ಬೇಟೆಯಾಡಿ ಇಬ್ಬರನ್ನು ಹೆಡೆಮುರಿ ಕಟ್ಟಿದ್ದಾರೆ.
ಐಸಿಸ್ ಉಗ್ರರ ಜತೆ ಸಂಪರ್ಕ ಹೊಂದಿರುವ ಆರೋಪದ ಮೇರೆಗೆ ಇಬ್ಬರನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಈ ಹಿಂದೆ ಪ್ರೇಮ್ ಸಿಂಗ್ ಇರಿತ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಮೊಬೈಲ್ ಗಳಲ್ಲಿ ಕೆಲವು ಉಗ್ರ ಸಂಘಟನೆಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಕೆಲವು ವ್ಯಕ್ತಿಗಳ ಬಗ್ಗೆ ಡಿಟೇಲ್ಸ್ ದೊರಕ್ಕಿತ್ತು. ಈ ಆಧಾರದಲ್ಲಿ ಇದೀಗ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ.
ತೀರ್ಥಹಳ್ಳಿ ಸೊಪ್ಪುಗುಡ್ಡೆಯ ಶಾರೀಕ್ ಹಾಗೂ ಸಿದ್ದೇಶ್ವರ ನಗರದ ಯಾಸಿನ್ ಬಂಧಿತರು. ಇನ್ನೊಬ್ಬನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಶಾರೀಕ್, ಸೊಪ್ಪುಗುಡ್ಡೆ, ತೀರ್ಥಹಳ್ಳಿ ಮತ್ತು ಆತನ ಸಹಚರರಾದ ಮಾಜ್ ಮುನೀರ್ ಅಹಮ್ಮದ್ ಮಂಗಳೂರು ಹಾಗೂ ಸಯ್ಯದ್ ಯಾಸೀನ್, ಸಿದ್ದೇಶ್ವರ ನಗರ ಶಿವಮೊಗ್ಗ ರವರುಗಳು ನಿಷೇಧಿತ ಭಯೋತ್ಪಾದಕ ಸಂಘಟನೆಯ ನಂಟನ್ನು ಹೊಂದಿದ್ದಾರೆ ಎಂದು ತಿಳಿದು ಬಂದಿದೆ.