ನ್ಯೂಸ್ ನಾಟೌಟ್: ಬಸ್ ಹಾಗೂ ಎರಡು ಕಾರಿನ ನಡುವೆ ಭೀಕರ ಸರಣಿ ಅಪಘಾತ ಬಂಟ್ವಾಳದ ವಗ್ಗ ಬಳಿ ಸಂಭವಿಸಿದೆ. ಘಟನೆಯಲ್ಲಿ ವಿಟ್ಲ ಮೆಸ್ಕಾಂನ ಎಇಇ ಪ್ರವೀಣ್ ಜೋಶಿ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯದ ಮಾಹಿತಿ ಪ್ರಕಾರ ಮತ್ತೊಂದು ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.
ಬಂಟ್ವಾಳ ಕಡೆಯಿಂದ ವಗ್ಗ ಕಡೆಗೆ ಹೋಗುತ್ತಿದ್ದ ಕಾರು ಹಾಗೂ ವಗ್ಗದ ಮದ್ವ ಮನೆಯಿಂದ ಕಾರಿನಲ್ಲಿ ಬರುತ್ತಿದ್ದ ಮೆಸ್ಕಾಂ ಎಇಇ ಪ್ರವೀಣ್ ಜೋಶಿ ಅವರ ಕಾರು ಮುಖಾಮುಖಿಯಾಗಿದೆ. ಹಿಂಬದಿಯಿಂದ ಬಂದ ಕೆಎಸ್ ಆರ್ ಟಿಸಿ ಬಸ್ ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಜೋಶಿ ಅವರ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುವನ್ನು ಕಾರಿನೊಳಗಿಂದ ತೆಗೆಯಲು ಸಾರ್ವಜನಿಕರು ಹರಸಾಹಸ ಪಡಬೇಕಾಯಿತು. ಕ್ರೇನ್ ಬಳಸಿ ವಾಹನಗಳನ್ನು ರಸ್ತೆಯಿಂದ ಬದಿಗೆ ಸರಿಸಲಾಯಿತು.ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ ಮೂರ್ತಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.