ನ್ಯೂಸ್ ನಾಟೌಟ್ : ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅರಂತೋಡಿನಲ್ಲಿ ಅ. 31ರಂದು ಸಂಜೆ ನಡೆದಿದೆ. ಇವರಿಗೆ 45 ವರ್ಷ ವಯಸ್ಸಾಗಿತ್ತು.
ಮೃತರನ್ನು ಅರಂತೋಡು ಗ್ರಾಮದ ಉಳುವಾರು ಮನೆಯ ತೀರ್ಥಪ್ರಸಾದ್ ಎಂದು ಗುರುತಿಸಲಾಗಿದೆ. ಮನೆಯ ಹಿಂದಿನ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಈ ಹಿಂದೆಯೂ ಒಮ್ಮೆ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿ ಮರಣೋತ್ತರ ಪರೀಕ್ಷೆ ನಡೆಸಿದರು. ಮೃತರು ಪತ್ನಿ ಪದ್ಮಾವತಿ, ಪುತ್ರ ರಕ್ಷಿತ್, ಪುತ್ರಿ ಹವ್ಯ ಮತ್ತು ಬಂಧು- ಮಿತ್ರರನ್ನು ಅಗಲಿದ್ದಾರೆ.