ನ್ಯೂಸ್ ನಾಟೌಟ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋ ಸಾಗಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ದನ ಹಾಗೂ ಎಮ್ಮೆಗಳಲ್ಲಿ ಚರ್ಮ ಗಂಟು ರೋಗವು ವ್ಯಾಪಕವಾಗಿ ಹಬ್ಬುತ್ತಿದೆ. ಕ್ಯಾಪ್ರಿಪಾಕ್ಸ್ ಎಂಬ ವೈರಸ್ ನಿಂದ ಹಸುಗಳು ಸಾವಿಗೀಡಾಗುತ್ತಿವೆ. ಈ ರೋಗವು ದಕ್ಷಿಣ ಕನ್ನಡ ಜಿಲ್ಲೆಗೂ ಹಬ್ಬುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಂದ ಹಸುಗಳನ್ನು ತರುವುದು, ಎಮ್ಮೆಗಳನ್ನು ತರುವುದು ಹಾಗೂ ಇಲ್ಲಿಂದ ಅಲ್ಲಿಗೆ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಹಸುಗಳಿಂದ ಆರೋಗ್ಯವಂತ ಹಸುಗಳಿಗೂ ಸೋಂಕು ಹಬ್ಬುವ ಸಾಧ್ಯತೆ ಇದೆ. ಇದೆಲ್ಲವನ್ನು ಗಮನದಲ್ಲಿರಿಸಿಕೊಂಡು ಜಿಲ್ಲಾಧಿಕಾರಿಗಳು ಕ್ರಮ ತೆಗೆದುಕೊಂಡಿದ್ದಾರೆ. ಗುರುವಾರ (೨೦-೧೦-೨೦೨೨) ದಿಂದ ೩೦-೧೧-೨೦೨೨ ರ ತನಕ ಗೋ ಸಾಗಾಟವನ್ನು ನಿಷೇಧಿಸಲಾಗಿದೆ.