ನ್ಯೂಸ್ ನಾಟೌಟ್ : ತಡರಾತ್ರಿ ಗಾಂಜಾ ಸೇವಿಸಿ ಓಲಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿತರನ್ನು ಕಡಬ ತಾಲೂಕಿನ ಬಂಟ್ರ ಪಿಲಿಮಜಲು ಮರುವಂತಿಲ ನಿವಾಸಿ ಮಹಮ್ಮದ್ ಶಾಫಿ(35) , ಕಳಾರ ಕಾಲನಿ ನಿವಾಸಿ ಮಹಮ್ಮದ್ ತ್ವಾಹ(18) ಎಂದು ಗುರುತಿಸಲಾಗಿದೆ. ಪೊಲೀಸರು ರಾತ್ರಿ ವೇಳೆ ಗಸ್ತಿನಲ್ಲಿದ್ದಾಗ ಕಳಾರ ಸಮೀಪ ಅಂಗಡಿಯ ಪಕ್ಕದಲ್ಲಿ ಓರ್ವ ಗಾಂಜಾ ಸೇವಿಸಿ ತೂರಾಟ ನಡೆಸುತ್ತಿದ್ದ. ಈ ವಿಷಯ ತಿಳಿಯುದ್ದಂತೆ ಪೊಲೀಸರು ದಾಳಿ ನಡೆಸಿ ಆತನನ್ನು ವಶಕ್ಕೆ ತೆಗೆದುಕೊಂಡರು. ಇನ್ನೊಂದು ಪ್ರಕರಣವು ಮರ್ದಾಳದಲ್ಲಿ ನಡೆದಿದೆ. ಆಟೋ ರಿಕ್ಷಾ ನಿಲ್ದಾಣದ ಪಕ್ಕದಲ್ಲಿ ವ್ಯಕ್ತಿಯೋರ್ವ ಅಮಲು ಪದಾರ್ಥ ಸೇವಿಸಿ ತೂರಾಡುತ್ತಿರುವ ಮಾಹಿತಿ ವಶಕ್ಕೆ ಪಡೆದಿದ್ದಾರೆ. ಪೊಲೀಸ್ ವಶದಲ್ಲಿದ್ದ ಇಬ್ಬರನ್ನೂ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಸದ್ಯ ಬಂಧಿತರಿಂದ ಗಾಂಜಾ ಪೂರೈಸುವ ತಂಡದ ಬಗ್ಗೆ ವಿವರಣೆ ಪಡೆದಿದ್ದಾರೆ ಎನ್ನಲಾಗಿದೆ.