ನ್ಯೂಸ್ ನಾಟೌಟ್: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿ ವ್ಯಕ್ತಿಯೊಬ್ಬ ಸಿಕ್ಕಿಬಿದ್ದಿದ್ದಾನೆ. ಕೊಕ್ಕಡ ಸಮೀಪದ ಶಿಬಾಜೆಯಲ್ಲಿ ಘಟನೆ ನಡೆದಿದೆ. ಇದೀಗ ಆರೋಪಿ ದಯಾಣಂಧ ಎಂಬಾತನ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಅಪ್ರಾಪ್ತ ಯುವತಿಗೂ ಕಳೆಂಜ ಗ್ರಾಮದ ಯುವಕನಿಗೂ ಕಳೆದ ಕೆಲವು ತಿಂಗಳುಗಳಿಂದ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿತ್ತು. ಆಕೆಯ ಮೊಬೈಲ್ ಸಂಖ್ಯೆ ಪಡೆದು ಆತ ಚಾಟಿಂಗ್ ನಡೆಸುತ್ತಿದ್ದ. ಬಳಿಕ ಇಬ್ಬರ ನಡುವೆ ಪ್ರೀತಿಯಾಟ ನಡೆದಿತ್ತು. ಈ ನಡುವೆ ಆತ ಆಕೆಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿದ್ದಾನೆ.
ಇವರಿಬ್ಬರ ಲವ್ವಿಡವ್ವಿ ಮನೆಯವರಿಗೆ ಗೊತ್ತಾಗಿದೆ. ಆತನಿಗೆ ಇದೆಲ್ಲ ಮುಂದುವರಿದರೆ ಚೆನ್ನಾಗಿರಲ್ಲ ಎಂದು ಗೆದರಿದ್ದಾರೆ. ಮಾತ್ರವಲ್ಲ ಆಕೆಯನ್ನು ನೀನು ಮದುವೆಯಾಗಬೇಕು ಎಂದು ತಾಕೀತು ಮಾಡಿದ್ದಾರೆ. ಆದರೆ ಆತ ಅದಕ್ಕೆ ಒಪ್ಪಲಿಲ್ಲ. ಈ ವಿಷಯ ತಿಳಿದು ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾಳೆ ಎಂದು ತಿಳಿದು ಬಂದಿದೆ. ಸದ್ಯ ಮನೆಯವರು ಆಕೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.