ನ್ಯೂಸ್ ನಾಟೌಟ್: ನಿಂತಿದ್ದ ಕಾರೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತ ದೇಹ ಪತ್ತೆಯಾಗಿರುವ ಘಟನೆ ಸುಳ್ಯದ ಸರಕಾರಿ ಆಸ್ಪತ್ರೆಯ ಎದುರು ನಡೆದಿದೆ.
ಕಳೆದ 4 ದಿನಗಳಿಂದ ಕಾರು ನಿಂತಿತ್ತು. 2 ದಿನಗಳ ಹಿಂದೆಯೇ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಪೆರಾಜೆಯ ಪೆರಂಗಜೆ ಗೌರೀಶ ಎಂಬ ಯುವಕನದೆಂದು ತಿಳಿದು ಬಂದಿದೆ.
ಗುರುವಾರ ಅಂದ್ರೆ 4 ದಿನಗಳ ಹಿಂದೆ ಗೌರೀಶ ಕಾರಲ್ಲಿ ಬಂದು ಸರಕಾರಿ ಆಸ್ಪತ್ರೆಯ ಎದುರಿನ ಜಾಗದಲ್ಲಿ ಕಾರು ಪಾರ್ಕ್ ಮಾಡಿದ್ದರು. ವಿಪರೀತ ಕುಡಿತದ ಪರಿಣಾಮವಾಗಿ ಶುಕ್ರವಾರ ದಿನ ಮೃತಪಟ್ಟಿದ್ದಾರೆಂದು ಹೇಳಲಾಗುತ್ತಿದೆ. ಶವ ದುರ್ವಾಸನೆ ಬರತೊಡಗಿದ ಹಿನ್ನಲೆಯಲ್ಲಿ ಆದಿತ್ಯವಾರ ಬೆಳಗ್ಗೆ ಅಕ್ಕಪಕ್ಕದವರಿಗೆ ವಿಷಯ ಗೊತ್ತಾಯಿತು. ಸುಳ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪೆರಾಜೆಯ ಪೆರಂಗಜೆ ಲೋಕಯ್ಯ ಗೌಡರ ಮಗ ಗೌರೀಶ ( 30 ) ವಿಪರೀತ ಕುಡಿತದ ಚಟ ಹೊಂದಿದ್ದು ಆತನ ಪತ್ನಿ ಆಶ್ರಮವೊಂದಕ್ಕೆ ಸೇರಿದ್ದಾರೆನ್ನಲಾಗಿದೆ. ಗೌರೀಶರಿಗೆ ಇಬ್ಬರು ಮಕ್ಕಳಿದ್ದಾರೆ.