ನ್ಯೂಸ್ ನಾಟೌಟ್ : ಸುಳ್ಯ ನಗರ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾದ ಶಾಂತಿ ಪ್ರಭುರವರ ಪತಿ ಸುಳ್ಯದ ಜಟ್ಟಿಪಳ್ಳ ನಿವಾಸಿ ಕೇಶವ ಪ್ರಭುರವರು ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಜೀವನ್ಮರಣದ ಸ್ಥಿತಿಯಲ್ಲಿರುವ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ಇಂದು ಪೂರ್ವಾಹ್ನ 11 ಗಂಟೆಯ ಸುಮಾರಿಗೆ ಅವರ ಮನೆಯೊಳಗೆ ಈ ಘಟನೆ ನಡೆದಿದೆ. ವಿಷಯ ತಿಳಿದ ಕೂಡಲೇ ಆಸ್ಪತ್ರೆಗೆ ರವಾನಿಸಲಾಯಿತು. ಕೇಶವ ಪ್ರಭು ಗುಂಡು ಹಾರಿಸಿಕೊಳ್ಳಲು ಕಾರಣವೇನೆಂಬ ಬಗ್ಗೆ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.