ನ್ಯೂಸ್ ನಾಟೌಟ್ : ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಾಲು ಸಮೇತ ಹಿಡಿದು ಪೊಲೀಸ್ ಠಾಣೆಗೆ ಕರೆ ತರುವ ವೇಳೆ ಪೊಲೀಸ್ ಜೀಪಿನ ಮುಂಭಾಗದ ಚಕ್ರ ಜಾರಿ ಹೊರಕ್ಕೆ ಬಿದ್ದ ಘಟನೆ ಶುಕ್ರವಾರ ಉಪ್ಪಿನಂಗಡಿಯಲ್ಲಿ ನಡೆದಿದೆ.
ನೆಲ್ಯಾಡಿ ಹೊರ ಠಾಣಾ ವ್ಯಾಪ್ತಿಯ ಉದನೆ ಎಂಬಲ್ಲಿ ವ್ಯಕ್ತಿಯೋರ್ವ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು ಆತನನ್ನು ಹಿಡಿದು ಬಂಧಿಸಿದ್ದರು. ನಂತರ ಪೊಲೀಸ್ ಜೀಪಿನಲ್ಲಿ ಕೂರಿಸಿ ಉಪ್ಪಿನಂಗಡಿ ಠಾಣೆಗೆ ಕರೆ ತರುತ್ತಿದ್ದರು. ಪೊಲೀಸ್ ಠಾಣೆ ಸಮೀಪಿಸುವ ವೇಳೆ ಜೀಪಿನ ಮುಂಭಾಗದ ಚಕ್ರ ಜೀಪಿನಿಂದ ಬೇರ್ಪಟ್ಟಿದೆ. ತಕ್ಷಣ ಜೀಪು ಜೋರಾಗಿ ಅಲುಗಾಡಿದೆ. ಅದೃಷ್ಟವಶಾತ್ ಯಾರಿಗೂ ಅಪಾಯವಾಗಲಿಲ್ಲ ಎಂದು ತಿಳಿದು ಬಂದಿದೆ.