ನ್ಯೂಸ್ ನಾಟೌಟ್: ನಾಳೆಯಿಂದ ರಾಜ್ಯದಾದ್ಯಂತ 108 ಆಂಬುಲೆನ್ಸ್ ಸೇವೆಯಲ್ಲಿ ಭಾರಿ ವ್ಯತ್ಯಯವಾಗುವ ಸಾಧ್ಯತೆ ಇದೆ. ನೌಕರರು ಬಾಕಿ ವೇತನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮುಷ್ಕರ ನಡೆಸುತ್ತಿದ್ದು ಇದರ ಬಿಸಿ ರೋಗಿಗಳಿಗೆ ತಟ್ಟುವುದು ಬಹುತೇಕ ಖಚಿತವಾಗಿದೆ.
ಈ ಕುರಿತಂತೆ ಮಾಧ್ಯಮದೊಂದಿಗೆ ಮಾತನಾಡಿದ 108 ಆಂಬುಲೆನ್ಸ್ ಸೇವೆ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಪರಮಶಿವಯ್ಯ, ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ಆಂಬುಲೆನ್ಸ್ ಒದಗಿಸುತ್ತಿರುವಂತಹ ಜೆವಿಕೆ ವೇತನವನ್ನು ಬಾಕಿ ಉಳಿಸಿಕೊಂಡಿದೆ. ವೇತನವಿಲ್ಲದೆ ನೌಕರರು ಪರದಾಡುತ್ತಿದ್ದಾರೆ. ಈ ಹಿಂದೆ ಅನೇಕ ಬಾರಿ ವೇತನ ಬಿಡುಗಡೆ ಕೋರಿದ್ದರು ನೀಡಿಲ್ಲ. ಈ ಹಿನ್ನೆಲೆಯಲ್ಲಿ ವೇತನ ಕೂಡಲೇ ನೀಡದಿದ್ದರೆ ಆಂಬುಲೆನ್ಸ್ ಸೇವೆ ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕೆಲ ದಿನಗಳ ಹಿಂದೆ 108 ಆಂಬುಲೆನ್ಸ್ ಸೇವೆಯ ಸರ್ವರ್ ಸಮಸ್ಯೆಯಿಂದಾಗಿ ರಾಜ್ಯದಾದ್ಯಂತ ವ್ಯತ್ಯಾಯ ಉಂಟಾಗಿತ್ತು. ಇದರಿಂದ ರೋಗಿಗಳಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆಗೆ ತೆರಳಲು ಸಾಧ್ಯವಾಗದೆ ಪರದಾಟ ನಡೆಸಿದ್ದರು. ಇದೀಗ ವೇತನ ವಿಚಾರವೂ ಮತ್ತೊಂದು ಸಲ ಮುಷ್ಕರಕ್ಕೆ ದಾರಿ ಮಾಡಿಕೊಟ್ಟಿದೆ.