ನ್ಯೂಸ್ ನಾಟೌಟ್ : ಪ್ರತಿ ವರ್ಷ ಮಕ್ಕಳ ದಿನಾಚರಣೆಯನ್ನು ದೇಶದಲ್ಲಿ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಅಂತೆಯೇ ನ.೧೪ರಂದು ದೇಶದೆಲ್ಲೆಡೆ ಶಾಲೆಗಳಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
ನ.14, 1964ರಂದು ಜವಾಹರಲಾಲ್ ನೆಹರು ಹುಟ್ಟಿದ ದಿನ. ಈ ಹಿನ್ನೆಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ನೆಹರು ಅವರಿಗೆ ಮಕ್ಕಳ ಮೇಲೆ ಅಪಾರ ಪ್ರೀತಿ ಇತ್ತು. ಪ್ರತಿಯೊಂದು ಶಾಲೆಗಳಲ್ಲಿ ಮಕ್ಕಳ ದಿನಾಚರಣೆಯನ್ನು ಅಚರಿಸಿ, ಮಕ್ಕಳಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸುತ್ತಾರೆ. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ, ಸ್ಪರ್ಧೆ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡುತ್ತಾರೆ.