ನ್ಯೂಸ್ ನಾಟೌಟ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದೆಲ್ಲೇಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ. ಹಾಗೆ ಶುರುವಾಗುವ ಮಳೆ ಈ ತಿಂಗಳಾಂತ್ಯದವರೆಗೂ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ತಿಳಿಸಲಾಗಿದೆ.
ಕರ್ನಾಟಕದ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಮಂಡ್ಯ, ರಾಮನಗರ, ಮೈಸೂರು, ತುಮಕೂರು ಹಾಗೂ ಉತ್ತರ ಕರ್ನಾಟಕದ ವಿಜಯಪುರ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಹಾಗೂ ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಕೊಡಗು ಪ್ರದೇಶಗಳಲ್ಲೂ ಜೋರು ಮಳೆಯಾಗಲಿದೆ. ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು ತುಂತುರು ಮಳೆಯಾಗಲಿದೆ. ರಾಜ್ಯಾದಲ್ಲಿ ೨೫ ಜಿಲ್ಲೆಗಳಲ್ಲಿ ನ.೨೭ ರವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.