ನ್ಯೂಸ್ ನಾಟೌಟ್: ಸುಳ್ಯದ ವಿವೇಕಾನಂದ ಸರ್ಕಲ್ ಬಳಿ ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ನಡೆದಿದೆ.
ಮೃತರನ್ನು ಬಾಬು (೫೮ ) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆಯಿಂದಲೇ ಅವರು ಅಲ್ಲಿ ಮದ್ಯಪಾನ ಮಾಡಿ ಮಲಗಿದ್ದರು. ನಂತರ ಎದ್ದುಕೊಂಡು ಬಂದು ವಿವೇಕಾನಂದ ಸರ್ಕಲ್ ಬಳಿಯ ಗುಜುರಿ ಅಂಗಡಿಯ ಎದುರು ಮಲಗಿದವರು ಮತ್ತೆ ಏಳಲೇ ಇಲ್ಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮೃತಪಟ್ಟಿರುವ ಸುದ್ದಿಯನ್ನು ಬುಧವಾರ ಬೆಳಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ಶವವನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಯಿತು. ಮೃತಪಟ್ಟವರನ್ನು ಮುಳಿಯ ಹೊಸಗದ್ದೆಯವರು ಎಂದು ತಿಳಿದು ಬಂದಿದೆ. ಅತಿಯಾದ ಮದ್ಯಪಾನದಿಂದ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಳಿಕ ಸತ್ಯಾಂಶ ತಿಳಿದು ಬರಲಿದೆ.