ನ್ಯೂಸ್ ನಾಟೌಟ್ : ಅಡಿಕೆ ಎಲೆ ಚುಕ್ಕೆ ರೋಗ ಹಾಗೂ ನಿರ್ವಹಣೆ ಬಗ್ಗೆ ರೈತರಿಗೆ ಮಾಹಿತಿ ಕಾರ್ಯಗಾರ ನ.28 ರಂದು ಉಬರಡ್ಕ ಮಿತ್ತೂರಿನ ಶ್ರೀ ನರಸಿಂಹ ಸಭಾಭವನದ ಶ್ರೀ ನರಸಿಂಹ ದೇವಾಲಯದ ವಠಾರದಲ್ಲಿ ನಡೆಯಲಿದೆ.
ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಸಹಕಾರ ಸಂಘ ನಿ. ಇದರ ವತಿಯಿಂದ ಕೃಷಿ ವಿಜ್ಞಾನ ಕೇಂದ್ರ (ದಕ್ಷಿಣ ಕನ್ನಡ) ಮಂಗಳೂರು ಇದರ ಸಹಯೋಗದೊಂದಿಗೆ ಅಡಿಕೆ ಎಲೆ ಚುಕ್ಕಿ ರೋಗ ಹಾಗೂ ನಿರ್ವಹಣೆ ಬಗ್ಗೆ ರೈತರಿಗೆ ಮಾಹಿತಿ ಕಾರ್ಯಗಾರ ನಡೆಯುತ್ತದೆ. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕಿಗಳಾದ, ಕೆವಿಕೆ ಮಂಗಳೂರಿನ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ.ಟಿ.ಜಿ. ರಮೇಶ ಹಾಗೂ ಕೆವಿಕೆ ಮಂಗಳೂರಿನ ವಿಜ್ಞಾನಿ (ಸಸ್ಯ ಸಂರಕ್ಷಣೆ) ಡಾ. ಕೇದಾರನಾಥ ಭಾಗವಹಿಸಲಿದ್ದಾರೆ. ಎಲ್ಲಾ ರೈತ ಬಾಂಧವರು ಈ ಕಾರ್ಯಕ್ರಮವದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಉಬರಡ್ಕ ಮಿತ್ತೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ .ನಿ ಅಧ್ಯಕ್ಷರು, ಆಡಳಿತ ಮಂಡಳಿ ಸರ್ವಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ವಿಶೇಷ ಕಾರ್ಯಕ್ರಮ ಆಯೋಜಿಸಿದ್ದಾರೆ.