ನ್ಯೂಸ್ ನಾಟೌಟ್: ಕಲ್ಲುಗುಂಡಿ ಸಮೀಪ ಬಸ್ -ಲಾರಿ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರ ಗಾಯಗೊಂಡಿದ್ದ ಲಾರಿ ಚಾಲಕ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ಮೈಸೂರು ಮೂಲದ ಚಾಲಕ ಅಪಘಾತದ ರಭಸಕ್ಕೆ ಲಾರಿ ಮಧ್ಯೆ ಸಿಲುಕಿಕೊಂಡಿದ್ದರು. ಅವರನ್ನು ಸ್ಥಳೀಯರು ಹಲವು ಹೊತ್ತಿನ ಕಾರ್ಯಾಚರಣೆ ನಡೆಸಿದ ಬಳಿಕ ಹೊರತೆಗೆದರು. ಈ ವೇಳೆ ಅವರ ಕಾಲು ಹಾಗೂ ಹೊಟ್ಟೆಯ ಭಾಗಕ್ಕೆ ಗಂಭೀರ ಗಾಯವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪ್ರಥಮ ಚಿಕಿತ್ಸೆ ಪಡೆದು ಮೈಸೂರಿನಲ್ಲಿರುವ ಆಸ್ಪತ್ರೆ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮೃತಪಟ್ಟರು ಎಂದು ವರದಿಯಾಗಿದೆ. ಮೈಸೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗೆ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಲಾರಿ ಮಂಗಳವಾರ ಸಂಜೆ ಡಿಕ್ಕಿ ಹೊಡೆದಿತ್ತು.