ನ್ಯೂಸ್ ನಾಟೌಟ್ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನವೆಂಬರ್ 19 ಶನಿವಾರದಂದು ಮಂಗಳೂರಿನ ಬಾವುಟ ಗುಡ್ಡೆಯಲ್ಲಿ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಿಎಂ ಬೊಮ್ಮಾಯಿ ಬೆಳಗ್ಗೆ 9.30ಕ್ಕೆ ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ಜಿಲ್ಲಾಡಳಿತ , ಸಂಸ್ಕೃತಿ ಇಲಾಖೆ ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆ ಆಯೋಜಿಸಿರುವ ಕೆಂದಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಬಳಿಕ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ ಸಿಎಂ ಬಜ್ಪೆವಿಮಾನ ನಿಲ್ದಾಣದ ಮೂಲಕ ಬೆಂಗಳೂರಿನತ್ತ ಪ್ರಯಾಣಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಒಕ್ಕಲಿಗ ಸಮುದಾಯದ ಮುಖಂಡರು, ನಾಯಕರು ಸೇರಿದಂತೆ ಹಲವಾರು ಮಂದಿ ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆ ಇದೆ.