ನ್ಯೂಸ್ ನಾಟೌಟ್ : ರಾಜ್ಯದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ರಾಜ್ಯ ಸರಕಾರ ಅಸ್ತು ಎಂದಿದೆ ಎನ್ನಲಾಗಿದೆ. ಈ ಕುರಿತು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಜಾಬ್ ವಿವಾದ ಹಿನ್ನಲೆಯಲ್ಲಿ ರಾಜ್ಯದ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. ಕಲಬುರಗಿ ,ಯಾದಗಿರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ೧೦ ಕಾಲೇಜುಗಳನ್ನು ಸ್ಥಾಪಿಸಲು ರಾಜ್ಯ ಸರಕಾರ ಮುಂದಾಗಿದೆ. ಹಾಗೂ ಪ್ರತೀ ಕಾಲೇಜಿಗೆ ೨. ೫ ಕೋಟಿ ರೂ . ಅನುದಾನವನ್ನು ಮೀಸರಿಸಲಾಗಿದೆ. ಮುಂದಿನ ತಿಂಗಳು ಈ ಯೋಜನೆಗೆ ಶಂಕುಸ್ಥಾಪನೆ ನೆರೆವೇರಿಸಲಾಗುತ್ತದೆ . ಉದ್ಘಾಟನೆಗೆ ಸಿ ಎಂ ಬೊಮ್ಮಾಯಿ ಕರೆಸಲಾಗುತ್ತದೆ ಎಂದು ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಮಾಹಿತಿ ನೀಡಿದರು. ಕಾಲೇಜು ನಿರ್ಮಾಣ ಮಾಡಲು ಬಿಡುವುದಿಲ್ಲ ಮಾಡಿದ್ರೆ ರಾಜ್ಯದಲ್ಲಿ ತೀವ್ರ ಹೋರಾಟ ನಡೆಸುತ್ತೇವೆ ಎಂದು ಶ್ರೀ ರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಟ್ಟೆಚ್ಚರಿಕೆ ನೀಡಿದ್ದಾರೆ.