ನ್ಯೂಸ್ ನಾಟೌಟ್: ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಹತ್ಯೆ ಪ್ರಕರಣದ ಆರೋಪಿಗಳನ್ನೆಲ್ಲ ಪೊಲೀಸರು ಬಂಧಿಸಿದ್ದಾರೆ. ಈ ಬೆನ್ನಲ್ಲೇ ಇದೀಗ ಸುರತ್ಕಲ್, ಬಜಪೆ, ಕಾವೂರು ಹಾಗೂ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೇರಿದ್ದ ಮದ್ಯ ಮಾರಾಟ ನಿರ್ಬಂಧ ಆದೇಶವನ್ನು ಹಿಂದಕ್ಕೆ ತೆಗೆದುಕೊಳ್ಳಲಿದೆ. ಸ್ವತಃ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಲೀಲ್ ಹತ್ಯೆಯಾದ ಬಳಿಕ ಮಂಗಳೂರಿನ ಸುರತ್ಕಲ್, ಬಜಪೆ, ಕಾವೂರು ಹಾಗೂ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಇದೀಗ ಎಲ್ಲ ಕಡೆ ನಿಧಾನವಾಗಿ ಸಹಜ ಸ್ಥಿತಿಗೆ ಬರುತ್ತಿದೆ ಎಂದು ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಿಷೇಧ ಆದೇಶ ವಾಪಾಸು ಪಡೆಯಲಾಗಿದೆ.