ನ್ಯೂಸ್ ನಾಟೌಟ್ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಿನ್ನೆ ತಾನೆ ತನ್ನ ತಾಯಿಯನ್ನು ಕಳೆದುಕೊಂಡ ನೋವಿನಲ್ಲಿ ಇದ್ದರೂ ಅಪಘಾತಕ್ಕೀಡಾಗಿರುವ ಟೀಮ್ ಇಂಡಿಯಾ ಆಟಗಾರ ರಿಷಬ್ ಪಂತ್ ಅವರ ಯೋಗಕ್ಷೇಮವನ್ನು ವಿಚಾರಿಸಿ, ಸರಳತೆಯನ್ನು ಮೆರೆದಿದ್ದಾರೆ.
ಆರೋಗ್ಯ ಕ್ಷೇಮ ವಿಚಾರಣೆ:
ಡಿ. 30 ರಂದು ಬೆಳಗ್ಗೆ ಬಿಎಂಡಬ್ಲು ಕಾರು ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ರಿಷಬ್ ಪಂತ್ ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಮಯದಲ್ಲಿ ಪ್ರಧಾನಿ ಮೋದಿಯವರು ತಾನು ತಾಯಿಯನ್ನು ಕಳೆದು ಕೊಂಡ ದುಖಃದ ನಡುವೆಯೂ ನಿನ್ನೆ ಸಂಜೆ ರಿಷಬ್ ಪಂತ್ ತಾಯಿಯೊಂದಿಗೆ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ರಿಷಬ್ ಪಂತ್ ಅವರ ಆರೋಗ್ಯ ಕ್ಷೇಮವನ್ನು ವಿಚಾರಿಸಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ ಸುದ್ದಿಸಂಸ್ಥೆ ‘ಎಎನ್ಐ’ ಮಾಹಿತಿ ನೀಡಿದೆ. ಮೋದಿಯವರು ಇದಕ್ಕು ಮುನ್ನ ತಮ್ಮ ಟ್ವಿಟರ್ ಖಾತೆಯಲ್ಲಿ ‘ಕ್ರಿಕೆಟಿಗ ರಿಷಬ್ ಪಂತ್ ಅವರ ಅಪಘಾತದಿಂದ ನೊಂದಿದ್ದೇನೆ. ಅವರ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ’ ಎಂದು ಬರೆದುಕೊಂಡಿದ್ದರು.