ನ್ಯೂಸ್ ನಾಟೌಟ್: ಉದ್ಯೋಗ ಹುಡುಕಾಟದಲ್ಲಿದ್ದೀರಾ? ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನಲ್ಲಿ ಉದ್ಯೋಗವನ್ನು ಎದುರು ನೋಡುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. IOCL ತಂತ್ರಜ್ಞ, ಪದವಿ ಮತ್ತು ಟ್ರೇಡ್ ಅಪ್ರೆಂಟಿಸ್ (ತಾಂತ್ರಿಕ ಮತ್ತು ತಾಂತ್ರಿಕೇತರ)ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IOCL ನ ಅಧಿಕೃತ ವೆಬ್ಸೈಟ್ iocl.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 1760 ಹುದ್ದೆಗಳು
ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಐಟಿಐ, ಪಿಯುಸಿ, ಡಿಪ್ಲೊಮಾ ಹಾಗೂ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ 18 ವರ್ಷದಿಂದ 24 ವರ್ಷಗಳ ನಡುವಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 03, 2023
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ https://iocl.com/ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ https://s3-ap-south-1.amazonaws.com/adda247jobs-wp-assets-adda247/jobs/wp-content/uploads/2022/12/13114410/IOCL-Recruitment-2022-Notification-PDF-Click-to-Download.pdf