ನ್ಯೂಸ್ ನಾಟೌಟ್ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅನಾರೋಗ್ಯದಿಂದಾಗಿ ನಗರದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ನಿರ್ಮಲಾ ಸೀತಾರಾಮನ್(೬೩) ಅನಾರೋಗ್ಯದಿಂದಾಗಿ ಆಸ್ಪತ್ರೆಯ ಖಾಸಗಿ ವಾರ್ಡ್ಗೆ ದಾಖಲಾಗಿದ್ದಾರೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾನುವಾರ ಸೀತಾರಾಮನ್ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಪ್ರಯುಕ್ತ ದೆಹಲಿಯ ‘ಸದೈವ್ ಅಟಲ್’ಗೆ ತೆರಳಿ ಪುಷ್ಪನಮನ ಸಲ್ಲಿಸಿದ್ದರು. ಈ ಬಗ್ಗೆ ಸಚಿವಾಲಯದಿಂದ ಅಥವಾ ಸಂಬಂಧಿತರಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಂದಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.