ನ್ಯೂಸ್ ನಾಟೌಟ್: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ ಮಾಡಿರುವ ರೈತರಿಗೆ ರಾಜ್ಯ ಮಟ್ಟದ ಕೃಷಿ ಪಂಡಿತ/ಶ್ರೇಷ್ಠ ಕೃಷಿಕ ಪ್ರಶಸ್ತಿ , ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು ವಿತರಿಸಲು ಪ್ರತಿ ವರ್ಷದಂತೆ ಈ ವರ್ಷವೂ ಸಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೃ ಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಾದ ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋ ಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ, ಹಸಿರು ಮನೆ, ಕಸಿ ಅಭಿವೃದ್ಧಿ ಸಸ್ಯಕಾಶಿ ಇತ್ಯಾದಿ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ ಮತ್ತಿತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಅರ್ಹ ಆಸಕ್ತ ರೈತರು ಅರ್ಜಿಯನ್ನು ಆಯಾಯ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಡಿಸೆಂಬರ್ 20 ಕೊನೆಯ ದಿನವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಬನ ಎಂ.ಶೇಖ್ ತಿಳಿಸಿದ್ದಾರೆ.