ನ್ಯೂಸ್ ನಾಟೌಟ್ : ಹಿಂದೂ ಯುವತಿಯೊಬ್ಬಳು ಮುಸ್ಲಿಂ ಯುವಕನ ಜತೆಗೆ ಸ್ಲೀಪರ್ ಕೋಚ್ ಬಸ್ ನಲ್ಲಿ ಪ್ರಯಾಣಿಸಿ ಸಿಕ್ಕಿಬಿದ್ದಿದ್ದಾಳೆ. ಇತ್ತೀಚೆಗೆ ಅನ್ಯಕೋಮಿನ ಜೋಡಿಗಳು ಅಲ್ಲಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ಕೈಗೆ ಸಿಕ್ಕಿ ಬೀಳುತ್ತಿರುವ ಬೆನ್ನಲ್ಲೇ ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿರುವುದು ವಿಶೇಷವಾಗಿದೆ.
ಯುವಕ-ಯುವತಿ ಪ್ರಯಾಣಿಸುತ್ತಿದ್ದ ಬಸ್ ಅನ್ನು ಕಲ್ಲಡ್ಕ ಬಳಿ ಹಿಂದೂ ಸಂಘಟನೆ ಕಾರ್ಯಕರ್ಯರು ತಡೆ ಹಿಡಿದಿದ್ದಾರೆ. ಭಟ್ಕಳದ ಮುಸ್ಲಿಂ ಯುವಕ- ಮಂಗಳೂರಿನ ಹಿಂದು ಯುವತಿ ಎಂದು ತಿಳಿದು ಬಂದಿದೆ. ಖಾಸಗಿ ಬಸ್ ನ ಸ್ಲೀಪರ್ ಕೋಚ್ನಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಪೊಲೀಸರ ಮಧ್ಯಪ್ರವೇಶ ಮಾಡಿ ಯುವತಿಯನ್ನು ಪೋಷಕರ ವಶಕ್ಕೆ ನೀಡಿದ್ದಾರೆ.