ನ್ಯೂಸ್ ನಾಟೌಟ್ : ಉದ್ಯೋಗ ಸಿಗುತ್ತಿಲ್ಲವೆಂದು ಚಿಂತೆಗೊಳಗಾಗಿದ್ದೀರಾ?ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಬಿಡುಗಡೆಯಾಗಿರುವ ನೋಟಿಫಿಕೇಶನ್ ಅನುಸಾರ, ಗ್ರೂಪ್-4 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ನೌಕರಿ ಹುಡುಕುತ್ತಿರುವವರು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು.ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಹುದ್ದೆಗಳು ಎಷ್ಟಿವೆ?
ಮೋಟಾರ್ ವೆಹಿಕಲ್ ಮೆಕ್ಯಾನಿಕ್ 04, ಮೋಟಾರ್ ವೆಹಿಕಲ್ ಎಲೆಕ್ಟ್ರಾನಿಕ್ಸ್ 01, ಕಾಪರ್ ಮತ್ತು ಟಿನ್ ಸ್ಮಿತ್ 01, ಉಫಲ್ ಸ್ಟಾರ್ 01 ಹುದ್ದೆಗಳು ಖಾಲಿ ಇವೆ. ಅಪ್ಲಿಕೇಶನ್ ಪ್ರಕ್ರಿಯೆಯು ಡಿಸೆಂಬರ್ 08, 2022 ರಿಂದ ಪ್ರಾರಂಭವಾಗಿದೆ. ಅರ್ಜಿಗಳ ಕೊನೆಯ ದಿನಾಂಕ ಡಿಸೆಂಬರ್ 31, 2022 ಎಂದು ನಮೂದಿಸಲಾಗಿದೆ.ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, 10ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಪರೀಕ್ಷೆ ಬರೆಯುವಂತಿಲ್ಲ. ಲಿಖಿತ ಪರೀಕ್ಷೆ ಇಲ್ಲದೇ ಸರ್ಕಾರಿ ಕೆಲಸಕ್ಕೆ ಸೇರಬಹುದು. ಆಯ್ಕೆ ಪ್ರಕ್ರಿಯೆಯು ಅಭ್ಯರ್ಥಿಗಳ 10ನೇ ತರಗತಿ ಅಂಕಗಳ ಮೆರಿಟ್ನ್ನು ಆಧರಿಸಿರುತ್ತದೆ.
ಅರ್ಜಿ ಶುಲ್ಕ ಎಷ್ಟು?
ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ.100 ಶುಲ್ಕವನ್ನು ಪಾವತಿಸಬೇಕು. SC ಮತ್ತು ST ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.
ಅಭ್ಯರ್ಥಿಗಳು ಆಫ್ಲೈನ್ ಮೋಡ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ಅಧಿಕೃತ ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಳ್ಳಬೇಕು. ಅದರಲ್ಲಿ ನಮೂದಿಸಿರುವ ವಿವರಗಳನ್ನು ನಮೂದಿಸಿ ಮತ್ತು ಸೂಕ್ತ ದಾಖಲೆಗಳನ್ನು ಲಗತ್ತಿಸಿ.ಅಗತ್ಯವಿದ್ದರೆ, ಅರ್ಜಿ ಶುಲ್ಕವನ್ನು ಪಾವತಿಸಿ. ಅರ್ಜಿ ನಮೂನೆ ಮತ್ತು ಅರ್ಹತಾ ಪ್ರಮಾಣಪತ್ರಗಳ ಜೆರಾಕ್ಸ್ ಪ್ರತಿಗಳನ್ನು ದಿ ಮ್ಯಾನೇಜರ್, ಮೇಲ್ ಮೋಟಾರ್ ಸರ್ವಿಸ್, ಬೆಂಗಳೂರು ಈ ವಿಳಾಸಕ್ಕೆ ಕಳುಹಿಸಬೇಕು.
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ವಯಸ್ಸು 18 ರಿಂದ 27 ವರ್ಷಗಳ ನಡುವೆ ಇರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.
ಮೋಟಾರ್ ವೆಹಿಕಲ್ ಮೆಕ್ಯಾನಿಕ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲೈಟ್ ಮತ್ತು ಹೆವಿ ಮೋಟಾರ್ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು. ವಾಹನದ ಮೋಟಾರು ಯಾಂತ್ರಿಕತೆಯ ಜ್ಞಾನವನ್ನು ಹೊಂದಿರಬೇಕು.