ನ್ಯೂಸ್ ನಾಟೌಟ್: ಭವಿಷ್ಯದಲ್ಲಿ ಕಂಬಳವು ವಿಶ್ವ ಪ್ರಸಿದ್ಧವಾದ ಕ್ರೀಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.
ಶಾಸಕ ಉಮಾನಾಥ್ ಕೋಟ್ಯಾನ್ ನೇತೃತ್ವದಲ್ಲಿ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯುತ್ತಿರುವ ೨೦ನೇ ವರ್ಷದ ಕೋಟಿ-ಚೆನ್ನಯ್ಯ ಕಂಬಳದಲ್ಲಿ ಪಾಲ್ಗೊಂಡು ಬೊಮ್ಮಾಯಿ ಮಾತನಾಡಿದರು, ಕಂಬಳದ ಕೋಣಗಳನ್ನು ನಿಯಂತ್ರಿಸುವುದು ಭಾರಿ ಸವಾಲು, ಶಕ್ತಿಯ ಜೊತೆಗೆ ಯುಕ್ತಿಯೂ ಬೇಕು. ಅದೊಂದು ಕಲೆ. ಮುಂದಿನ ದಿನಗಳಲ್ಲಿ ಈ ಕಲೆಯೂ ವಿದೇಶಗಳಲ್ಲಿ ನಡೆಯುವಷ್ಟರ ಮಟ್ಟಿಗೆ ಜನಪ್ರಿಯತೆ ಪಡೆದುಕೊಳ್ಳಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಂಬಳ ಸಮಿತಿ ವತಿಯಿಂದ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಸನ್ಮಾನಿಸಲಾಯಿತು. ಸಚಿವರಾದ ವಿ. ಸುನಿಲ್ ಕುಮಾರ್, ಸಿ.ಟಿ. ರವಿ, ಶಿಕ್ಷಣ ಸಚಿವ ನಾಗೇಶ್ , ಜಿಲ್ಲಾಧಿಕಾರಿ ರವಿ ಕುಮಾರ್, ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ್ ಪೂಜಾರಿ , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಕೆ., ವಲಯ ಅರಣ್ಯಾಧಿಕಾರಿ ಹೇಮಗಿರಿ ಅಂಗಡಿ, ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಗುಣಪಾಲ ಕಡಂಬ, ಬಾಸ್ಕರ್ ಎಸ್ ಕೋಟ್ಯಾನ್ ಉಪಸ್ಥಿತರಿದ್ದರು.