ನ್ಯೂಸ್ ನಾಟೌಟ್ : ಕಾಫಿಯ ತವರು ಹಾಗೂ ದಕ್ಷಿಣದ ಕಾಶ್ಮೀರ ಅಂತ ಕರೆಯುವ ಕಾಫಿ ನಾಡು ಕೂಡಗಿನಲ್ಲಿ ಇದೀಗ ಡಿ. 10 ಮತ್ತು 11ರಿಂದ ಕಾಫಿ ಮೇಳ ನಡೆಯಲಿದೆ.
ಈ ಬಗ್ಗೆ ಮಾತನಾಡಿದ ಕೊಡಗು ಜಿಲ್ಲಾಧಿಕಾರಿ ಡಾ. ಬಿ. ಸಿ. ಸತೀಶ್, “ಡಿಸೆಂಬರ್ 10 ಮತ್ತು 11ರಂದು ಕೊಡಗು ಕಾಫಿ ಮೇಳವು ನಗರದ ರಾಜಾಸೀಟ್ನಲ್ಲಿ ನಡೆಯಲಿದೆ ಎಂದು ಹೇಳಿದರು. ಕಾಫಿ ಮಂಡಳಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡನೇ ಶನಿವಾರ ಮತ್ತು ಭಾನುವಾರ ಗ್ರೇಟರ್ ರಾಜಸೀಟ್ನಲ್ಲಿ ಕೊಡಗು ಕಾಫಿ ಮೇಳವನ್ನು ಆಯೋಜಿಸಲಾಗಿದೆ ಎಂದು ಹೇಳಿದರು. ವಾರಾಂತ್ಯದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ರಾಜಸೀಟ್ಗೆ ಭೇಟಿ ನೀಡುತ್ತಾರೆ. ಹಾಗೂ ಕಾಫಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ಕಲ್ಪಿಸುವುದು ಹಾಗೂ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕೊಡಗು ಕಾಫಿ ಮೇಳ ಆಯೋಜಿಸಲಾಗಿದೆ ಎಂದು ತಿಳಿಸಿದರು. ಕಾಫಿ ಮೇಳದಲ್ಲಿ ವಿವಿಧ ಬ್ರಾಂಡ್ಗಳ ಕಾಫಿ, ಸ್ವಸಹಾಯ ಗುಂಪುಗಳ ಉತ್ಪನ್ನಗಳು ಬ್ರೂಯಿಂಗ್ ಯಂತ್ರೋಪಕರಣಗಳು ಪ್ರದರ್ಶನದಲ್ಲಿ ಇಡಲಾಗುತ್ತಿದೆ.