ನ್ಯೂಸ್ ನಾಟೌಟ್ : ಕೊಡಗು ಹಾಗೂ ಸುತ್ತಮುತ್ತಲಿನ ಯುವ ಜನತೆಗೆ ಕೊಡಗು ಜಿಲ್ಲಾಡಳಿತ ಸಿಹಿ ಸುದ್ದಿ ಪ್ರಕಟಿಸಿದೆ. ಡಿಸೆಂಬರ್ 13ರಿಂದ ಮೂರು ದಿನಗಳ ಕಾಲ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಈ ವಿಷಯವನ್ನು ಸ್ವತಃ ಕೊಡಗು ಜಿಲ್ಲಾಧಿಕಾರಿ ಡಾ ಬಿ . ಸಿ ಸತೀಶ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಇಂದಿನ ದಿನಗಳಲ್ಲಿ ಯುವಕರು ಹೆಚ್ಚಿನ ಶಿಕ್ಷಣ ಪಡೆದರೂ ಕೂಡ ಅವರಿಗೆ ಉತ್ತಮ ಕೆಲಸ ಸಿಗುತ್ತಿಲ್ಲ. ಹೀಗಾಗಿ ಯುವ ಜನತೆಗೆ ಸಹಾಯ ಆಗಬೇಕು ಅನ್ನುವ ಕಾರಣಕ್ಕೆ ನಾವು ಡಿಸೆಂಬರ್ 13 ರಂದು ಕುಶಾಲನಗರ ಸರಕಾರಿ ಪಾಲಿಟೆಕ್ನಿಕ್ ಕಾಲೇಜು, ಡಿಸೆಂಬರ್ 16 ರಂದು ಮಡಿಕೇರಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಡಿಸೆಂಬರ್ 20 ರಂದು ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಉದ್ಯೋಗ ಮೇಳ ನಡೆಯಲಿದೆ. ಹೆಚ್ಚಿನ ಯುವ ಜನರು ಉದ್ಯೋಗ ಮೇಳದಲ್ಲಿ ಭಾಗವಹಿಸಿ ಭವಿಷ್ಯದ ದಾರಿ ಕಂಡುಕೊಳ್ಳಬೇಕು ಎಂದು ತಿಳಿಸಿದರು.
ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಡಬ್ಲ್ಯೂ ಡಬ್ಲ್ಯೂ ಕೌಶಾಲಕರ್ ಡಾ .ಕೋಮ್ ಮಖಾಂತರ ನೋಂದಣಿ ಮಾಡಬಹುದು. ಅಭ್ಯರ್ಥಿಗಳಿಗೆ ಬಲ್ಕ್ ಎಸ್ಎಂಎಸ್ ಮೂಲಕ ಉದ್ಯೋಗ ಮೇಳದಲ್ಲಿ ಭಾಗವಹಿಸಲು ತಿಳಿಸಲಾಗುವುದು. 8753 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣ ಅಧಿಕಾರಿ ಡಾ . ಎಸ್ ಆಕಾಶ್ ಮತ್ತು ಜನರ ಅಭಿವೃದ್ದಿ ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆ ಅಧಿಕಾರಿ ಉಮಾ ತಿಳಿಸಿದ್ದಾರೆ.