ನ್ಯೂಸ್ ನಾಟೌಟ್ : ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದೆ. ಈ ಬೆನ್ನಲ್ಲೇ ಮೂವರು ಮುಸ್ಲಿಂ ಯುವಕರೊಂದಿಗೆ ಖಾಸಗಿ ಕಾಲೇಜಿನ ಹಿಂದೂ ಯುವತಿಯರು ಬರ್ತ್ ಡೇ ಪಾರ್ಟಿ ಮಾಡಿಕೊಂಡಿದ್ದಾರೆ ಅನ್ನುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬೆನ್ನಲ್ಲೇ ಹಿಂದೂ ಸಂಘಟನೆಗಳು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿವೆ.
13 ಮಂದಿ ಹಿಂದೂ ಹುಡುಗಿಯರು ಮೂವರು ಮುಸ್ಲಿಂ ಯುವಕರ ಜತೆಗೆ ಪುತ್ತೂರು ರೈಲು ನಿಲ್ದಾಣದಲ್ಲಿ ಬರ್ತ್ ಡೇ ಪಾರ್ಟಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದು ಲವ್ ಜಿಹಾದ್ ನ ಇನ್ನೊಂದು ಭಾಗ ಎನ್ನುವ ಆರೋಪ ಕೇಳಿ ಬಂದಿದೆ. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದರೂ ಇಲ್ಲಿ ತನಕ ಕಾಲೇಜು ಆಡಳಿತ ಮಂಡಳಿ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಅನ್ನುವ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆ ಕೆಲವು ದಿನಗಳ ಹಿಂದೆ ನಡೆದಿದೆ ಎಂದು ಹೇಳಲಾಗುತ್ತಿದೆ.