ನ್ಯೂಸ್ ನಾಟೌಟ್ : ಯುವಜನತೆಗೆ ಸಾಹಿತ್ಯದ ಕುರಿತಾಗಿ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಹಾಗೂ ಸಾಹಿತ್ಯದ ಕ್ಷೇತ್ರಕ್ಕೆ ಬರಮಾಡಿಕೊಳ್ಳುವ ನಿಟ್ಟಿನಲ್ಲಿ ಮಾತ್ರವಲ್ಲದೇ ಅವರಲ್ಲಿರುವ ಸುಪ್ತ ಪ್ರತಿಭೆಗಳನ್ನು ಅನಾವರಣಗೊಳಿಸುವ ನಿಟ್ಟಿನಲ್ಲಿ ‘ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ’ ಎಂಬ ಘೋಷ ವಾಕ್ಯದಲ್ಲಿ ಗ್ರಾಮ ಗ್ರಾಮದಲ್ಲೂ ಸಾಹಿತ್ಯ ಸಂಭ್ರಮ ಎಂಬ 2ನೇ ವಿನೂತನ ಕಾರ್ಯಕ್ರಮವು ಡಿ. 31 ಶನಿವಾರದಂದು ಸುಭೋದ ಪ್ರೌಢಶಾಲೆ ಆರ್ಲಪದವಿನಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣ ಅಧಿಕಾರಿ ಕಚೇರಿ ಗ್ರಾಮ ಪಂಚಾಯತ್ ಪಾಣಜೆಯ ಸಹಕಾರದಲ್ಲಿ ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಪುತ್ತೂರು ತಾಲೂಕಿನ 32 ಗ್ರಾಮಗಳಲ್ಲಿ ಈ ಸರಣಿ ಕಾರ್ಯಕ್ರಮ ನಡೆಯುತ್ತದೆ. ಕಳೆದ ತಿಂಗಳಿನಲ್ಲಿ ಕುಂಬ್ರದಲ್ಲಿ ಉದ್ಘಾಟನೆಗೊಂಡಿತ್ತು. ಇದೀಗ ಎರಡನೇ ಕಾರ್ಯಕ್ರಮವಾಗಿ ನಡೆಯಲಿದೆ. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕವಿ ಗೋಷ್ಠಿ, ಕಥಾ ಗೋಷ್ಠಿ, ಹಾಗೂ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳು ( ಹಾಡು, ನೃತ್ಯ, ಮಿಮಿಕ್ರಿ , ಇತ್ಯಾದಿ) ನೀಡಬಹುದಾಗಿದೆ. ಇದರಲ್ಲಿ ಭಾಗವಹಿಸಿದ ಸಾಹಿತಿಗಳಿಗೆ ಪ್ರಮಾಣ ಪತ್ರ ನೀಡಿ ಅಭಿನಂದಿಸಲಾಗುವುದು.