ನ್ಯೂಸ್ ನಾಟೌಟ್ : ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ತೋರಿಸದ ಮುಖ್ಯ ಶಿಕ್ಷಕನಿಗೆ ವಿದ್ಯಾರ್ಥಿನಿಯರೇ ಸರಿಯಾದ ಪಾಠ ಕಲಿಸಿದ್ದಾರೆ. ಇದೀಗ ಕಾಮುಕ ಶಿಕ್ಷಕನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ವಿದ್ಯಾರ್ಥಿಗಳೆಲ್ಲಾ ಸೇರಿ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕಟ್ಟೇರಿ ಗ್ರಾಮದಲ್ಲಿ ಮುಖ್ಯ ಶಿಕ್ಷಕ ಚಿನ್ಮಯ ಆನಂದ ಮೂರ್ತಿ ಹಾಸ್ಟೆಲ್ ಗೆ ತೆರಳಿ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ತೋರಿದ್ದಾನೆ. ತಡರಾತ್ರಿ ಹಾಸ್ಟೆಲ್ ನಲ್ಲಿ ಕೆಟ್ಟ ವರ್ತನೆ ಮಾಡುವಾಗ ಎಚ್ಚೆತ್ತ ವಿದ್ಯಾರ್ಥಿನಿ ಸಹಪಾಠಿಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಕೈಯಲ್ಲಿ ಕೋಲು -ದೊಣ್ಣೆ ಹಿಡಿದ ವಿದ್ಯಾರ್ಥಿನಿಯರು ಎಲ್ಲಾರೂ ಸೇರಿ ಕಾಮುಕ ಶಿಕ್ಷನ ಮೇಲೆ ದಾಳಿ ನಡೆಸಿ , ಧರ್ಮದೇಟು ನೀಡಿ ಪಾಠ ಕಲಿಸಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಶಿಕ್ಷಕನನ್ನು ಹಿಡಿದು ವಿಚಾರಣೆ ನಡೆಸಿದ ಪೊಲೀಸರು ಇನ್ನೂ ಹಲವು ವಿಚಾರಗಳನ್ನು ಬಹಿರಂಗ ಪಡಿಸಿದ್ದಾರೆ. ಶಿಕ್ಷಕನ ಕಾಮ ಪುರಾಣದ ಬಗ್ಗೆ ಈತನ ಮೊಬೈಲ್ ನಲ್ಲಿ ಮತ್ತಷ್ಟು ಮಾಹಿತಿ ದೊರಕಿದೆ. ಈತ ಶಿಕ್ಷಕಿಯೊಬ್ಬರನ್ನೂ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದು, ಶಿಕ್ಷಕಿ ಜೊತೆಗಿನ ಖಾಸಗಿ ಕ್ಷಣಗಳ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದೆ. ವಿದ್ಯಾರ್ಥಿನಿಯರಿಗೆ ಆ ವಿಡಿಯೋ ತೋರಿಸಿ ತನ್ನ ಜೊತೆ ಸಹಕರಿಸದಿದ್ದರೆ ಪರೀಕ್ಷೆಯಲ್ಲಿ ಫೇಲ್ ಮಾಡುವ ಬೆದರಿಕೆಯೊಡ್ಡಿದ್ದ ಎನ್ನಲಾಗಿದೆ. ಆರೋಪಿ ಶಿಕ್ಷಕನನ್ನು ವಜಾ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ಜಿಪಂ ಕೆಡಿಪಿ ಸಭೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಸಿಇಒಗೆ ಸೂಚನೆ ನೀಡಿದ್ದಾರೆ.