ನ್ಯೂಸ್ ನಾಟೌಟ್ : ಅಡಿಕೆಗೆ ಹಳದಿ ರೋಗ ಬಂದು ಕೃಷಿಕರಿಗೆ ಭಾರಿ ನಷ್ಟವಾಗಿದೆ. ಅಡಿಕೆ ಬೆಳೆಗಾರರಿಗೆ ಕೇಂದ್ರ, ರಾಜ್ಯ ಸರಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ .ಯಾವುದೇ ರೀತಿಯ ಪರಿಹಾರ ನೀಡಿಲ್ಲ. ಸುಳ್ಯ ತಾಲೂಕಿನಲ್ಲಿ ವ್ಯಾಪಕವಾಗಿ ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗ ಬಂದು ಅಡಿಕೆ ಬೆಳೆಗಾರರ ಜೀವನೋಪಾಯಕ್ಕೆ ಕಷ್ಟವಾಗಿದೆ. ಇದು ಹೀಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸುತ್ತೇವೆ. ರೈತರಿಗೆ ನ್ಯಾಯ ಒದಗಿಸುವ ಕೆಲಸವಾಗಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ್ ಅಡ್ಪಂಗಾಯ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.
ಹೋರಾಟದ ಎಚ್ಚರಿಕೆ:
ಈ ವೇಳೆ ಮಾತನಾಡಿದ ಧನಂಜಯ ಅಡ್ಪಂಗಾಯ, ಸುಳ್ಯ ತಾಲೂಕಿನಲ್ಲಿ ವಿವಿಧ ಗ್ರಾಮಗಳಲ್ಲಿ ಹಳದಿ ಎಲೆ ರೋಗ ಬಾಧೆಯಿಂದ ಕೃಷಿ ನಾಶವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಳದಿ ರೋಗದ ಬಗ್ಗೆ ಪ್ರಸ್ತಾಪ ಇನ್ನೂ ಆಗಿಲ್ಲ. ಆದರೆ ಗೋರಕ್ ಸಿಂಗ್ ಸಮಿತಿಯು ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಮಾತ್ರ ಭೇಟಿ ನೀಡಿ ಅಧ್ಯಯನ ನಡೆಸಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಯಾವುದೆ ರೀತಿಯ ಪ್ರತಿಕ್ರಿಯೆ ದೊರಕಲಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಹೋರಾಟ ಮಾಡುತ್ತೇವೆ ಎಂದು ಹೇಳಿದರು. ರೈತರಿಗೆ ಬೆಂಬಲ ಬೆಲೆ ಕೊಡಬೇಕು. ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಬೇಕು. ಎಲ್ಲಾ ರೈತರ ಮನೆಯಲ್ಲಿ ಯಾರದಾರೂ ಒಬ್ಬರಿಗೆ ಸರಕಾರಿ ಉದ್ಯೋಗ ಕೊಡಬೇಕು. ವಿದೇಶದಿಂದ ಆಮದು ಮಾಡುವುದನ್ನು ನಿಲ್ಲಿಸಬೇಕು ಹಾಗೂ ಸುಳ್ಯದ ಜನರಲ್ ನಾಯಕರಿಗೆ ಹುದ್ದೆ ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಶೀಘ್ರವಾಗಿ ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗಕ್ಕೆ ತೋಟಗಾರಿಕೆ ಇಲಾಖೆಯವರು ಅಡಿಕೆ ಬೆಳೆಗಾರರಿಗೆ ಉಚಿತ ಔಷಧಿ ನೀಡಬೇಕು ಎಂದು ಆಗ್ರಹ ಮಾಡುತ್ತೇವೆ ಎಂದು ಹೇಳಿದರು.
ಈ ವೇಳೆ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ್ , ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ. ಎಂ. ಶಹೀದ್ ತೆಕ್ಕಿಲ್, ಬ್ಲಾಕ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಪಿ.ಸಿ ಗಂಗಾಧರ, ನಗರ ಕಾಂಗ್ರೆಸ್ ಅಧ್ಯಕ್ಷ ಎಂ. ಜೆ. ಶಶಿಧರ, ಕಾಂಗ್ರೆಸ್ ವಕ್ತಾರ ನಂದರಾಜ ಸಂಕೇಶ ಉಪಸ್ಥಿತರಿದ್ದರು.