ನ್ಯೂಸ್ ನಾಟೌಟ್ : ಇಡೀ ದೇಶವನ್ನೇ ಬೆಚ್ಚಿ ಬೀಳಿಸುವಂತೆ ಮಾಡಿದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮತ್ತಷ್ಟು ವಿಚಾರಗಳು ಬಯಲಿಗೆ ಬರುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 20 ಆರೋಪಿಗಳ ವಿರುದ್ಧ ಎನ್ಐಎ ಚಾರ್ಜ್ಶೀಟ್ ಸಲ್ಲಿಸಿದೆ.240 ಸಾಕ್ಷಿಗಳ ಹೇಳಿಕೆಗಳನ್ನು ಒಳಗೊಂಡಿರುವ ಒಟ್ಟು 1,500 ಪುಟಗಳ ಚಾರ್ಜ್ಶೀಟ್ ಅನ್ನು NIA ಅಧಿಕಾರಿಗಳು ಕೋರ್ಟ್ಗೆ ಸಲ್ಲಿಸಿದ್ದಾರೆ.
ಬೆಚ್ಚಿ ಬೀಳಿಸುವ ಅಂಶ ಬಹಿರಂಗ:
ಕೂಲೆ ಪ್ರಕರಣ ಸಂಬಂಧ ಈವರೆಗೆ 14 ಆರೋಪಿಗಳನ್ನು ಬಂಧಿಸಿಲಾಗಿದ್ದು, 6 ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎನ್ನಲಾಗಿದೆ.ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಎನ್ ಐ ಎ ಚಾರ್ಜ್ ಶೀಟ್ ನಲ್ಲಿ ಬೆಚ್ಚಿ ಬೀಳಿಸುವ ಅಂಶ ಬಹಿರಂಗಗೊಂಡಿದೆ.ಮಸೂದ್ ಕೊಲೆ ರಿವೇಂಜ್ ಗೆ ಪಿಎಫ್ಐ ಶಪಥಗೈದಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ.ಮಸೂದ್ ಅಂತ್ಯಕ್ರಿಯೆ ಜಾಗದಲ್ಲೇ ಪಿಎಫ್ಐ ಈ ನಿರ್ಧಾರ ತೆಗೆದುಕೊಂಡಿರುವ ಬಗ್ಗೆ ವರದಿಯಾಗಿದೆ.ಹಿಂದೂ ಸಂಘಟನೆ , ಬಿಜೆಪಿಯಲ್ಲಿ ಗುರುತಿಸಿಕೊಂಡವರನ್ನು ಹತ್ಯೆ ಮಾಡಲು ಯೋಜನೆ ರೂಪಿಸಲಾಗಿತ್ತು ಎಂಬ ವಿಷಯವನ್ನು ಮಾಧ್ಯಮವೊಂದು ವರದಿ ಮಾಡಿದೆ.