ನ್ಯೂಸ್ ನಾಟೌಟ್ :ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮ್ಮೇಳನ ಮತ್ತು ಸಾಧನಾ ಸಂಭ್ರಮ -2023 ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು.
ಸಭಾ ಕಾರ್ಯಕ್ರಮವನ್ನು ಎಂಆರ್ಜಿ ಗ್ರೂಪ್ ಆಡಳಿತ ನಿರ್ದೇಶಕ ಪ್ರಕಾಶ್ ಶೆಟ್ಟಿ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು “ಪತ್ರಕರ್ತರಿಗೆ ತ. ರಾತ್ರಿಯೇ ಆಗಿರಲಿ , ಹಗಲೇ ಆಗಿರಲಿ ಏನಾದರೂ ಮುಖ್ಯ ಘಟನೆಗಳಾದಾಗ ಅವರು ವರದಿ ಮಾಡೋದಕ್ಕೆ ಸಿದ್ದರಾಗಿರಬೇಕು.ಇವರು ಸರಕಾರ ಮತ್ತು ಜನರ ನಡುವೆ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಾರೆ “ಎಂದು ಪ್ರಕಾಶ್ ಶೆಟ್ಟಿ ಹೇಳಿದರು.ಸಮ್ಮೇಳನದ ಅಧ್ಯಕ್ಷತೆಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ವಹಿಸಿದ್ದರು.ಈ ಸಂದರ್ಭ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರ ‘ಭಾವ ಚಿತ್ರ ಯಾನ -2’ ಕೃತಿಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಬಿಡುಗಡೆ ಮಾಡಿದರು.ಈ ವೇಳೆ ಬಿಜೈ- ಕಾಪಿಕಾಡ್ ಅಂಗನವಾಡಿ ಮಕ್ಕಳಿಗೆ ಕ್ರೀಡಾ ಪರಿಕರಗಳನ್ನು ಸಾಂಬ ಸದಾಶಿವ ಅವರು ವಿತರಿಸಿದರು.
ಛಾಯಾಚಿತ್ರ ಪ್ರದರ್ಶನ ಉದ್ಘಾಟನೆಯನ್ನು ಶಾಸಕ ಯು. ಟಿ .ಖಾದರ್ ಹಾಗೂ ಜಿಲ್ಲಾ ಸಮ್ಮೇಳನದ ಕಿಟ್ ವಿತರಣೆಯನ್ನು ಶಾಸಕ ವೇದವ್ಯಾಸ್ ಕಾಮತ್ ನೆರವೇರಿಸಿದರು.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿದರು.ಸಮ್ಮೇಳನದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪಟ್ಲ ಫೌಂಡೇಶನ್ ನ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಉದ್ಘಾಟಿಸಿದರು.ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ| ಡಾ| ಪಿ.ಎಸ್. ಯಡಪಡಿತ್ತಾಯ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಗುರ್ಮೆ ಸುರೇಶ್ ಶೆಟ್ಟಿ, ರೋನ್ಸ್ ಬಂಟ್ವಾಳ್, ಬ್ಯಾಂಕ್ ಆಫ್ ಬರೋಡಾದ ಆಧಿಕಾರಿ ಗಾಯತ್ರಿ ಮತ್ತಿತರರು ಈ ಸಂದರ್ಭದಲ್ಲಿದ್ದರು.
ಈ ವೇಳೆ ಪತ್ರಕರ್ತ ವಿಕ್ರಂ ಕಾಂತಿಕೆರೆಯವರ ಕೃತಿ ‘ಕಾವೇರಿ ತೀರದ ಪಯಣ’ ಕೃತಿಯನ್ನು ಬಿಡುಗಡೆಗೊಳಿಸಲಾಯಿತು.ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಪ್ರೆಸ್ ಕ್ಲಬ್ ಅಧ್ಯಕ್ಷ ಮಂಗಳೂರು, ಮಹಮ್ಮದ್ ಆರಿಫ್. ಪತ್ರಿಕಾ ಭವನ ಟ್ರಸ್ಟ್ ನ ಅಧ್ಯಕ್ಷ ರಾಮಕೃಷ್ಣ, ಭಾಸ್ಕರ ರೈ ಕಟ್ಟ, ರವೀಂದ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.