ನ್ಯೂಸ್ ನಾಟೌಟ್ : ಕೊಡಗಿನ ಪ್ರವಾಸೋದ್ಯಮವನ್ನು ಉತ್ತೇಜಿಸುವುದಕ್ಕಾಗಿ ಮತ್ತು ಪ್ರವಾಸಿಗರ ಗಮನವನ್ನು ಸೆಳೆಯಲು ಕೊಡಗು ಜಿಲ್ಲಾಡಳಿತ ಮತ್ತೊಂದು ಹೊಸ ಯೋಜನೆ ರೂಪಿಸಲಾಗಿದ್ದು, ಮಡಿಕೇರಿಯ ರಾಜಾಸೀಟ್ನಲ್ಲಿ ಫಲಪುಷ್ಪ ಪ್ರದರ್ಶನ ಮತ್ತು ಗಾಂಧಿ ಮೈದಾನದಲ್ಲಿ ವೈನ್ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ ಎಂದು ಕೊಡಗು ಜಿಲ್ಲಾಡಳಿತ ತಿಳಿಸಿದೆ.
ಫೆಬ್ರವರಿ 3 ರಿಂದ 6 ರವರೆಗೆ ಜಿಲ್ಲಾಕೇಂದ್ರ ಮಡಿಕೇರಿಯ ರಾಜಾಸೀಟ್ನಲ್ಲಿ ಪ್ರವಾಸಿಗೋಸ್ಕರ ಗಮನ ಸೆಳೆಯಲು ಮತ್ತು ಕೊಡಗಿನ ಪ್ರಕೃತಿಯ ಸೌಂದರ್ಯವನ್ನು ಆಸ್ವಾಧಿಸಲು ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆಗಳ ಸಹಯೋಗದಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಸಂದರ್ಭ ನಾಲ್ಕು ವಿಭಾಗದಲ್ಲಿ ಫಲಪುಷ್ಪ ಪ್ರದರ್ಶನ ಇರಲಿದೆ. ಮತ್ತು ಪಕ್ಕದಲ್ಲಿಯೇ ಇರುವ ಗಾಂಧಿ ಮೈದಾನದಲ್ಲಿ ವೈನ್ ಪ್ರದರ್ಶನ ಅಲ್ಲದೆ ವಿವಿಧ ವಸ್ತುಗಳ ಮಾರಾಟ ಮೇಳ ಮತ್ತು ವಸ್ತುಪ್ರದರ್ಶನ ನಡೆಯಲಿದೆ ಎಂದು ಕೊಡಗು ಜಿಲ್ಲಾಧಿಕಾರಿ ಡಾ. ಬಿ ಸಿ. ಸತೀಶ್ ತಿಳಿಸಿದ್ದಾರೆ.