ಕೊಡಗು: ಯುವತಿಯೊಬ್ಬಳನ್ನು ಕತ್ತಿಯಿಂದ ಕೊಚ್ಚಿ ಬರ್ಬರ ಕೊಲೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಲ ಗ್ರಾಮದಲ್ಲಿ ನಡೆದಿದೆ. ಈಕೆಯ ಹತ್ಯೆ ಯಾರು ಮಾಡಿದ್ದಾರೆ,ಯಾಕೆ ಮಾಡಿದ್ದಾರೆ ಅನ್ನುವ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ.
ನಾಂಗಲ ಗ್ರಾಮದ ಬುಟ್ಟಿಯಂಡ ಮಾದಪ್ಪ, ಸುನಂದ ಅವರ ಪುತ್ರಿ ಆರತಿ (24) ಕೊಲೆಯಾದ ಯುವತಿ ಎಂದು ತಿಳಿದು ಬಂದಿದೆ. ಈಕೆಯ ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಮನೆಯಿಂದ ಹೊರಗೆ ಕರೆಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿರಾಜಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಪ್ರೀತಿ -ಪ್ರೇಮಕ್ಕೆ ಹರಿಯಿತೇ ನೆತ್ತರು? ಅನ್ನುವ ಅನುಮಾನ ವ್ಯಕ್ತವಾಗಿದೆ. ಅಪರಿಚಿತ ವ್ಯಕ್ತಿ ಕೃತ್ಯ ಎಸಗಿದ್ದಾನೆ.