ನ್ಯೂಸ್ ನಾಟೌಟ್ : ಕರಾವಳಿಯನ್ನೇ ಬೆಚ್ಚಿಬೀಳಿಸಿದ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ವಿಚಾರಗಳು ಬೆಳಕಿಗೆ ಬರುತ್ತಿವೆ. ಮಂಗಳೂರು ಪೊಲೀಸರು ತನಿಖೆಯನ್ನು ಮುಂದುವರಿಸಿದ್ದು, ಇನ್ನೂ ಹಲವರು ಬಲೆಗೆ ಬಿದ್ದಿದ್ದಾರೆ. ಇದೀಗ ಇನ್ನೂ ಒಂಬತ್ತು ಮಂದಿಯನ್ನು ಬಂಧಿಸಲಾಗಿದ್ದು, ಇವರಲ್ಲಿ ಇಬ್ಬರು ವೈದ್ಯರು ಮತ್ತು ಏಳು ಮಂದಿ ವೈದ್ಯ ವಿದ್ಯಾರ್ಥಿಗಳು ಸೇರಿದ್ದಾರೆ ಎಂದು ತಿಳಿದು ಬಂದಿದೆ.
ಇಬ್ಬರು ಡಾಕ್ಟರ್ಸ್ ಅರೆಸ್ಟ್!
ಮಂಗಳೂರು ಮತ್ತು ಮಣಿಪಾಲ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರು ಹಾಗೂ ವೈದ್ಯ ವಿದ್ಯಾರ್ಥಿಗಳನ್ನು ಗಾಂಜಾ ಸೇವನೆ ಮತ್ತು ಮಾರಾಟದ ಪ್ರಕರಣದಲ್ಲಿ ಈ ಹಿಂದೆ ಬಂಧಿಸಲಾಗಿತ್ತು.ಶ್ರೀನಿವಾಸ ಆಸ್ಪತ್ರೆಯ ವೈದ್ಯ , ರಾಜ್ಯದವರೇ ಆದ ಸಿದ್ದಾರ್ಥ್ ಪವಸ್ಕರ್ (೨೯) ಮತ್ತು ದುರ್ಗಾ ಸಂಜೀವಿನಿ ಆಸ್ಪತ್ರೆಯ ವೈದ್ಯ ,ಕರ್ನಾಟಕದ ಡಾ.ಸುಧೀಂದ್ರ (೩೪) ಬಂಧಿತ ಡಾಕ್ಟರ್ ಗಳಾಗಿದ್ದಾರೆ.
ಬಂಧಿತರ ಸಂಖ್ಯೆ ೨೪ಕ್ಕೇರಿಕೆ:
ಮಂಗಳೂರಿನ ಕೆ.ಎಂ.ಸಿ ಮೆಡಿಕಲ್ ಕಾಲೇಜಿನ ಏಳು ಮಂದಿ ವಿದ್ಯಾರ್ಥಿಗಳು ಸೆರೆಯಾಗಿದ್ದಾರೆ. ಉತ್ತರ ಪ್ರದೇಶದ ವಿದುಶ್ ಕುಮಾರ್(27), ದೆಹಲಿಯ ಶರಣ್ಯ(23), ಕೇರಳದ ಸೂರ್ಯಜಿತ್ ದೇವ್(20), ಕೇರಳದ ಆಯೇಷಾ ಮಹಮ್ಮದ್(23),ತೆಲಂಗಾಣದ ಪ್ರಣಯ್ ನಟರಾಜ್(24), ತೆಲಂಗಾಣದ ಚೈತನ್ಯಾ(23), ಉತ್ತರ ಪ್ರದೇಶದ ಇಶ್ ಮಿದ್ದ(24) ಬಂಧಿತ ವಿದ್ಯಾರ್ಥಿಗಳು. ಈವರೆಗೆ ಡಾಕ್ಟರ್ಸ್ ಗಾಂಜಾ ಕೇಸ್ ನಲ್ಲಿ ಬಂಧಿತರ ಸಂಖ್ಯೆ 24ಕ್ಕೆ ಏರಿಕೆಯಾದಂತಾಗಿದೆ.