ನ್ಯೂಸ್ ನಾಟೌಟ್ : ಹಾಸ್ಟೇಲ್ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಮುರುಘಾ ಮಠ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಅವರು ಜೈಲು ಸೇರಿದ್ದಾರೆ. ಆದ್ರೆ ಬಾಲಕಿಯರ ಮೇಲೆ ಅತ್ಯಾಚಾರ ಆಗಿಲ್ಲ ಎಂದು ಜಿಲ್ಲಾಸ್ಪತ್ರೆಯ ವೈದ್ಯರು ವರದಿ ನೀಡಿದ್ದು ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಬಾಲಕಿಯರ ಮೇಲೆ ಅತ್ಯಾಚಾರವಾಗಿಲ್ಲ:
ಚಿತ್ರದುರ್ಗದ ಮುರುಘಾಶರಣರ ವಿರುದ್ಧ ಕಳೆದ ಆಗಸ್ಟ್ ೨೭ರಂದು ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಇಬ್ಬರು ಬಾಲಕಿಯರು ಲೈಂಗಿಕ ದೌರ್ಜನ್ಯದ ದೂರು ನೀಡಿದ್ದರು,ಮುರುಘಾಶ್ರೀಗಳು ತಮ್ಮ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು, ಹಾಸ್ಟೆಲ್ ವಾರ್ಡನ್ ಆಗಿರುವ ರಶ್ಮಿ ಅವರು ಇದಕ್ಕೆ ಸಹಕಾರ ನೀಡುತ್ತಿದ್ದಾರೆ ಎಂದು ಆಪಾದಿಸಲಾಗಿತ್ತು. ಜತೆಗೆ ಇತರ ಮೂವರನ್ನೂ ಆರೋಪಿಗಳೆಂದು ಗುರುತಿಸಲಾಗಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ೧ರಂದು ಶ್ರೀಗಳನ್ನು ಬಂಧಿಸಿದ್ದು ಅಂದಿನಿಂದ ಜೈಲು ವಾಸ ಅನುಭವಿಸುತ್ತಿದ್ದಾರೆ.
ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯಲ್ಲಿ ಮುಖ್ಯ ವೈದ್ಯಾಧಿಕಾರಿಗಳು ಬಾಲಕಿಯರ ವೈದ್ಯಕೀಯ ಪರೀಕ್ಷೆಯನ್ನು ನಡೆಸಿದ್ದರು.ಒಬ್ಬ ಬಾಲಕಿಯ ವೈದ್ಯಕೀಯ ಪರೀಕ್ಷೆ ಆಗಸ್ಟ್ ೨೮ರಂದು ನಡೆದಿದ್ದರೆ, ಇನ್ನೊಬ್ಬಳ ಪರೀಕ್ಷೆ ಸೆಪ್ಟೆಂಬರ್ ೨೯ರಂದು ನಡೆದಿತ್ತು.ಇಬ್ಬರೂ ವಿದ್ಯಾರ್ಥಿನಿಯರ ವೈದ್ಯಕೀಯ ಪರೀಕ್ಷೆ ನಡೆಸಿದ ವೈದ್ಯಾಧಿಕಾರಿಗಳು ಇಬ್ಬರೂ ಮಕ್ಕಳ ಯೋನಿ ಪೊರೆಗೆ ಯಾವುದೇ ಹಾನಿಯಾಗಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.