ನ್ಯೂಸ್ ನಾಟೌಟ್ : ವಿದ್ಯಾರ್ಥಿಗಳ ಭವಿಷ್ಯದ ಬದುಕು ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ವ್ಯಕ್ತಿತ್ವ ಬೆಳೆಸುವುದು ಶಿಕ್ಷಕರ ಜವಾಬ್ದಾರಿ.ಇತ್ತೀಚಿನ ದಿನಗಳಲ್ಲಿ ಆ ಶಿಕ್ಷಕ ಅನ್ನುವ ವೃತ್ತಿಗೆ ಧಕ್ಕೆಯಾಗುವಂತಹ ಕೆಲಸಗಳು ಕೆಲ ಶಿಕ್ಷಕರಿಂದ ಆಗುತ್ತಿದೆ.ಇತ್ತೀಚೆಗಷ್ಟೇ ಓರ್ವ ಶಿಕ್ಷಕ ವಿದ್ಯಾರ್ಥಿನಿಗೆ ಪ್ರೇಮ ಪತ್ರ ನೀಡಿದ್ದ.ಇದೀಗ ಕೊಡಗಿನಲ್ಲಿ ಶಿಕ್ಷಕನೋರ್ವ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿರುವ ಪ್ರಕರಣ ವರದಿಯಾಗಿದೆ.
ಏನಿದು ಪ್ರಕರಣ ?
ಕೊಡಗಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಹೈಸ್ಕೂಲ್ ಮುಖ್ಯ ಶಿಕ್ಷಕನೊಬ್ಬನ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ಚೆಯ್ಯಂಡಾಣಿಯ ಅನುದಾನಿತ ಶಾಲೆಯೊಂದರ ಮುಖ್ಯ ಶಿಕ್ಷಕ ಮನೋಹರ್ ಮೇಲೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಪ್ರಕರಣ ದಾಖಲಾಗಿದೆ.
ಅಸಭ್ಯ ವರ್ತನೆ ಆರೋಪ:
ಪ್ರೌಢ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಈತ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಇವರಿಬ್ಬರೂ ಹತ್ತನೆ ತರಗತಿಯಲ್ಲಿ ಕಲಿಯುತ್ತಿದ್ದು, ಅವರನ್ನು ಮುಖ್ಯ ಶಿಕ್ಷಕರ ಕಚೇರಿಗೆ ಕರೆಸಿಕೊಂಡು ಅಸಭ್ಯ ವರ್ತನೆ ತೋರಿದ ಆರೋಪವಿದೆ.ತಮಗೆ ಶಾಲೆಯಲ್ಲಿ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ವಿದ್ಯಾರ್ಥಿಯರು ಪೋಷಕರಿಗೆ ತಿಳಿಸಿದ್ದರು. ಅವರು ಪೊಲೀಸ್ ಠಾಣೆಗೆ ದೂರು ನೀಡಿದರು. ಇದೀಗ ಮಡಿಕೇರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕೋ ಪ್ರಕರಣ ದಾಖಲಾಗಿದೆ.