ನ್ಯೂಸ್ ನಾಟೌಟ್ : ಭಾರತೀಯ ಸ್ಟೇಟ್ ಬ್ಯಾಂಕ್ ಶೀಘ್ರದಲ್ಲೇ ಖಾಲಿ ಇರುವ ಹುದ್ದೆಗಳ ನೇಮಕಾತಿ ನಡೆಸಲಿದೆ. ಅದಕ್ಕಾಗಿ ಈಗಾಗಲೇ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಎಸ್ಬಿಐನಲ್ಲಿ ನಿವೃತ್ತ ಬ್ಯಾಂಕ್ ಆಫೀಸರ್ಸ್/ಸ್ಟಾಫ್ ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಬಹುದು. ಜನವರಿ 10, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಿ. ಒಟ್ಟು 1438 ಹುದ್ದೆಗಳು ಖಾಲಿ ಇವೆ.
ಅಭ್ಯರ್ಥಿಗಳು ಅರ್ಜಿ ಹಾಕುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ/ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಇದರ ಜೊತೆಗೆ ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನಿವೃತ್ತ ಬ್ಯಾಂಕ್ ಆಫೀಸರ್ ಅಥವಾ ನೌಕರರಾಗಿರಬೇಕು. ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ ಅನುಭವ ಹೊಂದಿರಬೇಕು. ನೇಮಕಾತಿಯ ಎಲ್ಲಾ ಷರತ್ತು ಮತ್ತು ನಿಯಮಗಳನ್ನು ಅಭ್ಯರ್ಥಿಗಳು ಒಪ್ಪಿಕೊಳ್ಳಬೇಕು.
ನಿವೃತ್ತ ಬ್ಯಾಂಕ್ ಆಫೀಸರ್ಸ್/ಸ್ಟಾಫ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 25,000-40,000 ರೂ. ವೇತನ ಕೊಡಲಾಗುತ್ತದೆ.
ರೆಸ್ಯೂಮ್ , 10ನೇ ತರಗತಿ, ಪಿಯುಸಿ ಮಾರ್ಕ್ಸ್ ಕಾರ್ಡ್, ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್, ಜಾತಿ ಪ್ರಮಾಣ ಪತ್ರ, ಗುರುತಿನ ಕಾರ್ಡ್(ಆಧಾರ್ ಕಾರ್ಡ್, ಲೈಸೆನ್ಸ್), ಪಾಸ್ಪೋರ್ಟ್ ಸೈಜಿನ ಫೋಟೋ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 10, 2023.