ವರದಿ: ಶ್ರೀಜಿತ್ ಸಂಪಾಜೆ
ನ್ಯೂಸ್ ನಾಟೌಟ್: ಹಿಂದೂ ಸಂಘಟನೆಗಳ ಮನವಿಗೆ ಕೊನೆಗೂ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಆಡಳಿತ ಮಂಡಳಿ ಮಣಿದಿದೆ.
ಸುಳ್ಯ ಜಾತ್ರೋತ್ಸವದಲ್ಲಿ ಎಲ್ಲ ಧರ್ಮೀಯರಿಗೆ ಮುಕ್ತ ವ್ಯಾಪಾರಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಆಡಳಿತ ಮಂಡಳಿ ಸಭೆಯಲ್ಲಿ ಈ ಮೊದಲು ಘೋಷಿಸಲಾಗಿತ್ತು. ಇದನ್ನೂ ಹಿಂದೂ ಸಂಘಟನೆ ವಿರೋಧಿಸಿತ್ತು. ಅಲ್ಲದೆ ಹಿಂದೂಗಳಿಗೆ ಮಾತ್ರ ಅವಕಾಶ ನೀಡಬೇಕೆಂದು ಚೆನ್ನಕೇಶವ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಡಾ|ಕೆ.ವಿ. ಚಿದಾನಂದ ಅವರಿಗೆ ಮನವಿ ಮಾಡಿತ್ತು. ತಕ್ಷಣ ಇದಕ್ಕೆ ಸ್ಪಂದಿಸಿದ ಡಾ|ಕೆ.ವಿ. ಚಿದಾನಂದ ಅವರು ಸಂಜೆ ೬ ಗಂಟೆಗೆ ತುರ್ತು ಸಭೆಯನ್ನು ಕರೆದಿದ್ದರು. ಅದರಂತೆ ಎಲ್ಲರ ನಿರ್ಣಯವನ್ನು ತೆಗೆದುಕೊಂಡು ಅಂತಿಮವಾಗಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಎಂಬ ನಿರ್ಧಾರಕ್ಕೆ ಬರಲಾಯಿತು.
ಇತಿಹಾಸ ಪ್ರಸಿದ್ಧ ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವದಲ್ಲಿ ಸಂತೆ ವ್ಯಾಪಾರ ನಡೆಸಲು ಹಿಂದೂಯೇತರ ವ್ಯಾಪಾರಿಗಳಿಗೆ ಅವಕಾಶ ನೀಡಬಾರದೆಂದು ಒತ್ತಾಯಿಸಿ ಸುಳ್ಯ ತಾಲೂಕು ಹಿಂದೂ ಹಿತ ರಕ್ಷಣಾ ವೇದಿಕೆಯ ಕಾರ್ಯಕರ್ತರು ಚೆನ್ನಕೇಶವ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಡಾ|ಕೆ.ವಿ. ಚಿದಾನಂದ ಅವರಿಗೆ ಮನವಿ ಸಲ್ಲಿಸಿದ್ದರು. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಹಿಂದೂ ಹಿತ ರಕ್ಷಣಾ ವೇದಿಕೆಯ ಸಂಚಾಲಕ ಚಿದಾನಂದ ವಿದ್ಯಾನಗರ, ಕೇಶವ ನಾಯಕ್ ಸುಳ್ಯ, ಸುನೀಲ್ ಕೇರ್ಪಳ, ಲತೀಶ್ ಗುಂಡ್ಯ, ಪ್ರಶಾಂತ್ ಕಾಯರ್ತೋಡಿ, ಮಹೇಶ್ ಉಗ್ರಾಣಿ ಮನೆ ಹಿಂದೂ ಜಾಗರಣಾ ವೇದಿಕೆ ಸಂಚಾಲಕರು ಸುಳ್ಯ, ನಿಕೇಶ್ ಉಬರಡ್ಕ ಮತ್ತಿತರರು ಮನವಿ ಕೊಡುವ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮನವಿ ನೀಡಿದ ಬೆನ್ನಲ್ಲೇ ಚೆನ್ನಕೇಶವ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಡಾ| ಕೆ.ವಿ. ಚಿದಾನಂದ ಅವರು ತುರ್ತು ಸಭೆ ಕರೆದು ಚರ್ಚೆ ನಡೆಸುವ ನಿರ್ಧಾರ ತೆಗೆದುಕೊಂಡರು. ಇದರಂತೆ ಚೆನ್ನಕೇಶವ ದೇವಸ್ಥಾನದಲ್ಲಿ ಸಭೆ ನಡೆಸಲು ತೀರ್ಮಾನಿಸಲಾಯಿತು.
ಈ ಸಂದರ್ಭ ದೇವಾಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ.ಹರಪ್ರಸಾದ್ ತುದಿಯಡ್ಕ,ನಿವೃತ್ತ ಬಿಡಿಒ ಎಂ.ಮೀನಾ ಕ್ಷಿ ಗೌಡ, ಕೃಪಾಶಂಕರ ತುದಿಯಡ್ಕ , ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಮತ್ತು ಹಿಂದೂ ಸಂಘಟನೆ ಪ್ರಮುಖರು ಹಾಗೂ ಸದಸ್ಯರು ಉಪಸ್ಥಿತರಿದ್ದರು.