ನ್ಯೂಸ್ ನಾಟೌಟ್: ನೆಹರು ಮೆಮೋರಿಯಲ್ ಕಾಲೇಜಿನಲ್ಲಿ 74ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್(ರಿ.) ಇದರ ಅಧ್ಯಕ್ಷ ಡಾ. ಕೆ.ವಿ ಚಿದಾನಂದ ಅವರು ಧ್ವಜಾರೋಹಣ ನೆರವೇರಿಸಿದರು.
ನಂತರ ಮಾತನಾಡಿದ ಅವರು ಗಣರಾಜ್ಯೋತ್ಸವ ಆಚರಣೆಯ ಮೂಲಕ ನಮ್ಮ ದೇಶವು ಪ್ರಜಾಪ್ರಭುತ್ವಗೊಳ್ಳಲು ದುಡಿದ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್, ಹಲವಾರು ಸ್ವಾತಂತ್ರ ಹೋರಾಟಗಾರರನ್ನು, ಗಡಿ ಕಾಯುವ ಸೈನಿಕರನ್ನು, ದೇಶದ ರೈತರನ್ನು, ವೈದ್ಯಕೀಯ ಸಿಬ್ಬಂದಿಗಳನ್ನು, ಶಿಕ್ಷಣ ಕ್ಷೇತ್ರದ ಸಾಧಕರನ್ನು ನೆನೆಯುವುದು ಹಾಗೂ ಅವರ ಕರ್ತವ್ಯ ನಿಷ್ಠೆ ಮತ್ತು ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಆದ್ಯ ಕರ್ತವ್ಯ ಎಂದರು. ಕಾಲೇಜಿನ ವಿವಿಧ ಘಟಕಗಳಾದ ಎನ್.ಸಿ.ಸಿ, ಎನ್.ಎಸ್.ಎಸ್, ರೇಂಜರ್ & ರೋವರ್ಸ್ ಯುತ್ ರೆಡ್ ಕ್ರಾಸ್ಗಳಿಂದ ಗೌರವ ವಂದನೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್(ರಿ.)ನ ಉಪಾಧ್ಯಕ್ಷೆ ಶ್ರೀಮತಿ ಶೋಭಾ ಚಿದಾನಂದ, ನೆಹರು ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರುದ್ರಕುಮಾರ್ ಎಂ.ಎ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಮತಿ ರತ್ನಾವತಿ ಡಿ., ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಹರಿಣಿ ಪುತ್ತುರಾಯ, ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರು ಹಾಗೂ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಗೌಡ ಎಂ, ಪ್ರೊ. ಡಿ. ಜವರೇಗೌಡ, ಕಾಲೇಜಿನ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡರು.