ನ್ಯೂಸ್ ನಾಟೌಟ್ : ಪ್ರತಿದಿನವು ಒಳ್ಳೆಯ ಆಹಾರವೆಂದು ಸೇವಿಸುತ್ತೇವೆ. ಆದರೆ ಅದರಲ್ಲಿ ಸಕ್ಕರೆ ಮಟ್ಟವು ಹೆಚ್ಚಾಗಿರುವುದು ತಿಳಿದಿರುವುದಿಲ್ಲ. ಕೆಲವೊಂದು ಫುಡ್ ಗಳಲ್ಲಿ ಸಕ್ಕರೆ ಮಟ್ಟವು ಹೆಚ್ಚಾಗಿರುತ್ತದೆ. ಆದ್ದರಿಂದ ಮಧುಮೇಹ ರೋಗಿಗಳಿಗೆ ಅಪಾಯಕಾರಿಯಾಗಿದೆ. ದಿನನಿತ್ಯ ತರಕಾರಿಗಳನ್ನು ಸೇವಿಸುವುದರಿಂದ ಆರೋಗ್ಯವು ಚೆನ್ನಾಗಿರುತ್ತದೆ. ಹಾಗಾಗಿ ತರಕಾರಿಗಳನ್ನು ಹೆಚ್ಚಾಗಿ ಸೇವಿಸಬೇಕು. ಈ ಮಧುಮೇಹ ರೋಗಿಗಳಿಗೆ ಯಾವ ತರಕಾರಿ ಸೇವನೆ ಮಾಡಿದರೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ ಎಂದು ತಿಳಿಯಬಹುದು.
ಮಧುಮೇಹ ರೋಗಿಗಳು ಸಾಮಾನ್ಯವಾಗಿ ಅಧಿಕ ಅಥವಾ ಕಡಿಮೆ ರಕ್ತದಲ್ಲಿನ ಸಕ್ಕರೆ ಮಟ್ಟದ ಅಪಾಯ ಎದುರಿಸುತ್ತಾರೆ. ಈ ಕಾರಣದಿಂದ ಅವರ ಆರೋಗ್ಯವು ಯಾವಾಗಲೂ ಅಪಾಯದಲ್ಲಿರುತ್ತದೆ. ಮಧುಮೇಹವು ತುಂಬಾ ಸಂಕೀರ್ಣವಾದ ಸಮಸ್ಯೆಯಾಗಿದೆ. ಏಕೆಂದರೆ ಇದು ಹೃದ್ರೋಗ ಮತ್ತು ಮೂತ್ರಪಿಂಡದ ಕಾಯಿಲೆಯಂತಹ ಅನೇಕ ಇತರ ಕಾಯಿಲೆಗಳಿಗೆ ಕಾರಣವಾಗುತ್ತದೆ. ರೋಗಿಗಳು ಸೇವಿಸುವ ಆಹಾರದ ಬಗ್ಗೆ ಸಂಪೂರ್ಣ ಕಾಳಜಿ ತೆಗೆದುಕೊಳ್ಳಬೇಕಾಗುತ್ತದೆ. ಸಿಕ್ಕ ಸಿಕ್ಕ ಆಹಾರಗಳನ್ನು ಸೇವಿಸಬಾರದು. ಏಕೆಂದರೆ ಸ್ವಲ್ಪ ಅಜಾಗರೂಕತೆ ವಹಿಸಿದರೂ ಸಹ ಆರೋಗ್ಯದ ಮೇಲೆ ಮಾರಣಾಂತಿಕ ಪರಿಣಾಮ ಉಂಟಾಗುತ್ತದೆ.
ಮಧುಮೇಹಿಗಳಿಗೆ ತರಕಾರಿಗಳು
ಬ್ರೊಕೊಲಿ ಇದು ಒಳ್ಳೆಯ ತರಕಾರಿಯಾಗಿದ್ದು, ಮಧುಮೇಹ ರೋಗಿಗಳು ನಿಯಮಿತವಾಗಿ ಸೇವಿಸಿದರೆ ಅವರು ಸಕ್ಕರೆ ಮಟ್ಟದ ಬಗ್ಗೆ ಚಿಂತಿಸಬೇಕಾಗಿಲ್ಲ. ವಾಸ್ತವವಾಗಿ ಇದು ಸಲ್ಫೊರಾಫೇನ್ ಎಂಬ ಸಂಯುಕ್ತವನ್ನು ಹೊಂದಿರುತ್ತದೆ ಮತ್ತು ಗ್ಲೂಕೋಸ್ ಮಟ್ಟವನ್ನು ಕಾಯ್ದುಕೊಳ್ಳುವ ಮಧುಮೇಹ ವಿರೋಧಿ ಗುಣಗಳನ್ನು ಹೊಂದಿದೆ.
ಟೊಮೇಟೊ ಪಿಷ್ಟ ಮುಕ್ತ ತರಕಾರಿಯಾಗಿದೆ. ಮಧ್ಯಮ ಗಾತ್ರದ ಟೊಮೇಟೊ ತಿಂದರೆ ದೇಹಕ್ಕೆ ಕೇವಲ 5 ಗ್ರಾಂ ಕಾರ್ಬೋಹೈಡ್ರೇಟ್ ಸಿಗುತ್ತದೆ. ಇದರ ಗ್ಲೈಸೆಮಿಕ್ ಸೂಚ್ಯಂಕ ಕಡಿಮೆ ಇರುವುದರಿಂದ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
ಪಾಲಕ್ ಅನ್ನು ಹಸಿರು ಎಲೆಗಳ ತರಕಾರಿಗಳ ರಾಜ ಎಂದು ಕರೆದರೆ ತಪ್ಪಾಗುವುದಿಲ್ಲ. ಏಕೆಂದರೆ ಇದರಲ್ಲಿ ವಿಟಮಿನ್ ಎ, ವಿಟಮಿನ್ ಬಿ, ವಿಟಮಿನ್ ಸಿ, ವಿಟಮಿನ್ ಇ, ವಿಟಮಿನ್ ಕೆ, ಫೋಲೇಟ್ ಮತ್ತು ಡಯೆಟರಿ ಫೈಬರ್ ಸಮೃದ್ಧವಾಗಿದೆ. ಇದು ಮಧುಮೇಹಕ್ಕೆ ಸಹಾಯ ಮಾಡುತ್ತದೆ. ರೋಗಿಗಳಿಗೆ ಇದು ವರದಾನಕ್ಕಿಂತ ಕಡಿಮೆಯಿಲ್ಲ ಅಂತಾನೇ ಹೇಳಬಹುದು.
ಎಲೆಕೋಸು ಕಡಿಮೆ ಕಾರ್ಬೋಹೈಡ್ರೇಟ್ ಮತ್ತು ವಿಟಮಿನ್ ಸಿ ಯಲ್ಲಿ ಸಮೃದ್ಧವಾಗಿದೆ. ಇದು ನಿಮ್ಮ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಜೊತೆಗೆ ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ನೀವು ಒಂದು ಕಪ್ ಕತ್ತರಿಸಿದ ಎಲೆಕೋಸು ತೆಗೆದುಕೊಂಡರೆ, ಅದರಲ್ಲಿ ಕೇವಲ 5 ಗ್ರಾಂ.
( ಈ ಸಲಹೆಯ ಮೊದಲು ವ್ಯೆದ್ಯರ ಸಲಹೆ ಪಡೆದುಕೊಳ್ಳಿ)