ನ್ಯೂಸ್ ನಾಟೌಟ್: ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಹೀಗಿದ್ದರೂ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರನ್ನು ನಡೆದಾಡುವ ದೇವರೆಂದೇ ಕರೆಯಲಾಗುತ್ತದೆ. ಇದೀಗ ಜ್ಞಾನ ಯೋಗಾಶ್ರಮದ ಆವರಣ ಮುಂದೆ ಭಕ್ತರು ಸಾಕಷ್ಟು ಸಂಖ್ಯೆಯಲ್ಲಿ ನೆರೆದಿದ್ದಾರೆ. ಸಿದ್ದೇಶ್ವರ ಸ್ವಾಮೀಜಿ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತಿದ್ದಾರೆ.
ಸಾವಿರಾರು ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದುದ್ದರಿಂದ ಇವರನ್ನು ನಿಯಂತ್ರಿಸುವುದು ಕಷ್ಟವಾಗಿದೆ. ನಡೆದಾಡುವ ದೇವರು ಖ್ಯಾತಿಯ ಸಿದ್ಧೇಶ್ವರ ಸ್ವಾಮೀಜಿಯವರ ಪಲ್ಸ್ ರೇಟ್, ಬಿಪಿ ರೇಟ್ ಎಲ್ಲವು ಸ್ಥಿರವಾಗಿದೆ. ಆದರೆ ಸ್ವಾಮೀಜಿ ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗೆ ಒಪ್ಪುತ್ತಿಲ್ಲ. ಘನಹಾರವನ್ನು ಸ್ವೀಕರಿಸುತ್ತಿಲ್ಲ. ಕೇವಲ ದ್ರವ ಆಹಾರವನ್ನು ಮಾತ್ರ ಸ್ವೀಕರಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಶ್ರೀಗಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಶ್ರೀಗಳ ಆರೋಗ್ಯ ಸುಧಾರಿಸುತ್ತಿದ್ದು ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಭಾನುವಾರ ತಡರಾತ್ರಿ ನೀಡಿರುವ ವರದಿಯಲ್ಲಿ ವೈದ್ಯರು ತಿಳಿಸಿದ್ದಾರೆ.