ನ್ಯೂಸ್ನಾಟೌಟ್: ಉದ್ಯಾನನಗರಿಯಲ್ಲಿ ದಿನನಿತ್ಯ ಅಪಘಾತ ಪ್ರಕರಣಗಳು ಹೆಚ್ಚುತ್ತಿದೆ. ಬೆಂಗಳೂರಿನಲ್ಲಿ ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಇಂದು ಸಂಜೆ ಇನ್ನೋವಾ ಕಾರೊಂದು ಎರಡು ಕಾರು ಮತ್ತು ಬೈಕ್ಗಳಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರನ್ನು ಮಜಿದ್ಖಾನ್ ಎಂದು ಗುರುತಿಸಲಾಗಿದೆ. ರಿಯಾಜ್ ಖಾನ್ ಸೇರಿದಂತೆ ನಾಲ್ವರಿಗೆ ಗಾಯವಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೋವಾ ಕಾರನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.