ನ್ಯೂಸ್ ನಾಟೌಟ್ : ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು 90 ಲಕ್ಷ ಮೌಲ್ಯದ 24 ಕ್ಯಾರೆಟ್ ಶುದ್ದತೆಯ 1617 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. 2023ರ ಜನವರಿ19ನೇ ತಾರೀಖಿನಿಂದ 31ರವರೆಗೆ 5 ಪುರುಷ ಪ್ರಯಾಣಿಕರಿಂದ ಒಟ್ಟು 90 ಲಕ್ಷ ಮೌಲ್ಯದ ಚಿನ್ನ ವಶಪಡಿಸಿಕೊಳ್ಳಲಾಗಿದೆ.
ದುಬೈ ನಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕರನ್ನು ತಪಾಸಣೆ ನಡೆಸಿದಾಗ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ.ದುಬೈ ನಿಂದ ಆಗಮಿಸಿದ ಐವರು ಪುರುಷ ಪ್ರಯಾಣಿಕರು ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದು, ಪ್ಯಾಂಟ್, ಮಕ್ಕಳ ಅಂಗಿಯ ಬಟನ್ , ಟ್ರಾಲಿ ಬ್ಯಾಗ್ ಸೇರಿದಂತೆ ಗುದನಾಳದಲ್ಲಿ ಚಿನ್ನ ಇಟ್ಟು ಸಾಗಣೆ ಮಾಡುವುದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ ಆರೋಪಿಗಳ ವಿಚಾರಣೆ ನಡೆಸಿದ್ದಾರೆ.ಇದಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ಮತ್ತೋರ್ವ ಪ್ರಯಾಣಿಕನ ಬಳಿಯಿಂದ 6,42,740 ರೂ. ಮೌಲ್ಯದ ಸಿಗರೇಟ್ ಹಾಗೂ ಇ -ಸಿಗರೇಟ್ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಇವರು ವಿವಿಧ ವಿಧಾನಗಳ ಮೂಲಕ ಚಿನ್ನವನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸಿದ್ದರು. ದುಬೈನಿಂದ ಆಗಮಿಸಿದ ಪ್ರಯಾಣಿಕರು ಟ್ರಾಲಿ ಬ್ಯಾಗ್ನ ಬೀಡಿಂಗ್ನಲ್ಲಿ,ಗುದನಾಳದಲ್ಲಿ ಮರೆಮಾಚಿ ಚಿನ್ನವನ್ನು ಕಳ್ಳಸಾಗಣೆ ಮಾಡಲು ಪ್ರಯತ್ನ ಪಟ್ಟಿದ್ದರು.