ನ್ಯೂಸ್ ನಾಟೌಟ್: ಜಗತ್ತಿನಲ್ಲಿ ಕೆಟ್ಟ ಪೋಷಕರು ಇರುವುದಿಲ್ಲ ಅನ್ನುವುದನ್ನು ಕೇಳಿದ್ದೇವೆ. ಆದರೆ ಕೆಲವು ಸಲ ಅಂಥಹವರೂ ಇರುತ್ತಾರೆ ಅನ್ನುವುದು ಈಗ ಸಾಬೀತಾಗಿದೆ. ಮಂಗಳೂರಿನ ಸ್ಟೇಟ್ ಬ್ಯಾಂಕ್ ಸಮೀಪದ ಸರ್ವೀಸ್ ಬಸ್ ನಿಲ್ದಾಣದ ಬಳಿ ಹೆತ್ತವರು ನವಜಾತ ಶಿಶುವನ್ನು ಬಿಟ್ಟು ಹೋಗಿರುವ ಕರುಣಾಜನಕ ಕಥೆ ನಡೆದಿದೆ. ಸದ್ಯ ಮಗುವನ್ನು ರಕ್ಷಿಸಲಾಗಿದ್ದು ವೆನ್ಲಾಕ್ ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ವಿಭಾಗದಲ್ಲಿ ಮಗು ಚಿಕಿತ್ಸೆ ಪಡೆಯುತ್ತಿದೆ.
ಹೆತ್ತವರು ಬಿಟ್ಟು ಹೋಗಿರುವ ಮಗುವಿನ ಆರೋಗ್ಯದಲ್ಲಿ ವ್ಯತ್ಯಯವಾಗಿದೆ. ತಲೆಯಲ್ಲಿ ಸಣ್ಣ ಪುಟ್ಟ ಗಾಯಗಳಿವೆ. ಪತ್ತೆಯಾದ ವೇಳೆ ಮೂಗಿಗೆ ಟ್ಯೂಬ್ ಹಾಕಿದ ಸ್ಥಿತಿಯಲ್ಲಿತ್ತು. ಫಿಟ್ಸ್ ಕೂಡಾ ಇರುವುದು ತಿಳಿದು ಬಂದಿದೆ. ಗಂಡು ಮಗುವಾಗಿದ್ದು, ಜನಿಸಿ ಸುಮಾರು ಒಂದು ವಾರ ಆಗಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ.
ಲೈಟ್ ಕಂಬವೊಂದರ ಬುಡದಲ್ಲಿದ್ದ ಮಗುವನ್ನು ಅನಾಥ ಮಾಡಿ ಬಿಟ್ಟು ಹೋಗಲಾಗಿತ್ತು. ಇದನ್ನು ಗಮನಿಸಿದ ಚಾಲಕರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಬಂದು ಮಗುವನ್ನು ಲೇಡಿಗೋಷನ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಅಲ್ಲಿ ತಪಾಸಣೆ ನಡೆಸಿದ ಬಳಿಕ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಮಗುವಿನ ಆರೋಗ್ಯ ಸ್ಥಿರವಾಗಿಲ್ಲ. ಈ ಹಿನ್ನೆಲೆಯಲ್ಲಿ ಮಗುವನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಗುವನ್ನು ಮಧ್ಯಾಹ್ನದ ವೇಳೆಗೆ
ಮಾತ್ರ ಇರುವುದನ್ನು ನೋಡಿದ ಚಾಲಕರು ಪೊಲೀಸರಿಗೆ ತಿಳಿಸಿದ್ದಾರೆ. ಮಗು ಪತ್ತೆಯಾದ ಮಾಹಿತಿ ತಿಳಿಯುತ್ತಿದ್ದಂತೆ ಪಾಂಡೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಗುವನ್ನು ಲೇಡಿಗೋಷನ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ತಪಾಸಣೆ ನಡೆಸಿ ವೆನ್ಲಾಕ್ ಗೆ ದಾಖಲಿಸಲಾಗಿದೆ. ಮಗುವಿನ ಆರೋಗ್ಯ ಸ್ಥಿರವಾಗಿರದ ಕಾರಣ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಧ್ಯಾಹ್ನದ ವೇಳೆ ಸರ್ವಿಸ್ ಬಸ್ ನಿಲ್ದಾಣದಲ್ಲಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಹತ್ತಿರ ಈ ಮಗು ಇತ್ತೆಂದು ಹೇಳಲಾಗುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.