ನ್ಯೂಸ್ ನಾಟೌಟ್ : ಸ್ವಂತ ಮಗನನ್ನೇ ತಂದೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಕಟ್ಟೆಮಾಡು ಗ್ರಾಮದಲ್ಲಿ ಫೆ.19 ರಂದು ನಡೆದಿರುವುದಾಗಿ ವರದಿಯಾಗಿದೆ.
ನಂದೇಟಿರ ನಿರನ್ (28) ಸಾವನ್ನಪ್ಪಿದ ಮೃತ ಯುವಕನಾಗಿದ್ದು, ನಂದೇಟಿರ ಚಿಟ್ಟಿಯಪ್ಪ ಸಾಬು (58) ಹತ್ಯೆ ಮಾಡಿದ ಆರೋಪಿಯಾಗಿದ್ದು, ಇವರ ನಡುವೆ ಕೆಲವು ದಿನಗಳಿಂದ ಕೌಟುಂಬಿಕ ಕಲಹಗಳು ಉಂಟಾಗಿತ್ತು. ನಿರನ್ ಟಿವಿ ನೋಡುತ್ತಿದ್ದ ಸಂದರ್ಭದಲ್ಲಿ ತಂದೆ ಸಾಬು ಗುಂಡು ಹಾರಿಸಿ ಕೊಂದಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಮಡಿಕೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು , ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ್ದ ಕೋವಿಯನ್ನು ವಶಕ್ಕೆ ಪಡೆಯಲಾಗಿದೆ.