ನ್ಯೂಸ್ ನಾಟೌಟ್ : ತುಮಕೂರಿನಲ್ಲಿ ಫಾಝಿಲ್ ಕೊಲೆಯನ್ನು ಉಲ್ಲೇಖಸಿ ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ತುಮಕೂರಿನಲ್ಲಿ ಕೇಸ್ ದಾಖಲಾಗಿದೆ. ಇವರು ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್ ನನ್ನು ಹತ್ಯೆ ಮಾಡಲಾಗಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ತುಮಕೂರಿನ ತಿಲಕ್ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸೈಯದ್ ಬುರ್ಹಾನ್ ಉದ್ದೀನ್ ಎಂಬವರು ಶರಣ್ ವಿರುದ್ಧ ದೂರು ನೀಡಿದ್ದರು.ತುಮಕೂರಿನಲ್ಲಿ ಶರಣ್, ಫಾಝಿಲ್ ಹತ್ಯೆಯನ್ನು ಸಮರ್ಥಿಸಿ ಹೇಳಿಕೆ ಬೆನ್ನಲ್ಲೇ ವ್ಯಾಪಕ ವಿರೋಧ ವ್ಯಕ್ತವಾಗಿದ್ದವು. ಫಾಝಿಲ್ ತಂದೆ ಮಂಗಳೂರು ಕಮಿಷನರ್ ಗೆ ದೂರು ನೀಡಿದ್ದರು.ಆದರೆ ಪೊಲೀಸರು ಈವರೆಗೆ ಆತನನ್ನು ಬಂಧಿಸಿ ತನಿಖೆ ನಡೆಸಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿತ್ತು.ಇದರ ಬೆನ್ನಲ್ಲೇ ಇದೀಗ ಶರಣ್ ಪಂಪ್ ವೆಲ್ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.